Advertisement

ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

11:23 PM Sep 23, 2019 | Lakshmi GovindaRaju |

ಬೆಂಗಳೂರು: ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್‌) ಅಡಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ ನೀಡಿದರು. ವಿಕಾಸಸೌಧದಲ್ಲಿ ಸೋಮವಾರ ಕೆಶಿಪ್‌ ಹಾಗೂ ಕರ್ನಾಟಕ ರಾಜ್ಯ ನಿರ್ಮಾಣ ನಿಗಮದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

Advertisement

ಕೆಶಿಪ್‌ ವತಿಯಿಂದ ಮೊದಲ ಹಂತದಲ್ಲಿ 4615 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಗುರಿಯಲ್ಲಿ 4162 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಪೂರ್ಣಗೊಳಿಸಲಾಗಿದೆ. ಎರಡನೇ ಹಂತದಲ್ಲಿ 4522 ಕೋಟಿ ರೂ. ವೆಚ್ಚದಲ್ಲಿ 1195 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಗುರಿ ಹೊಂದಲಾಗಿದ್ದು, ಈ ಪೈಕಿ 1163 ಕಿ.ಮೀ. ಉದ್ದದ ರಸ್ತೆ ನಿರ್ಮಾಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸೇಫ್ ಕಾರಿಡಾರ್‌ ಡೆಮಾನ್‌ಸ್ಟ್ರೇಷನ್‌ ಯೋಜನೆ ಯಡಿ ಬೆಳಗಾವಿಯಿಂದ ಎರಗಟ್ಟಿವರೆಗೆ ನಿರ್ಮಿಸಿರುವ ರಸ್ತೆಯಲ್ಲಿ ಅಪಘಾತಗಳ ಪ್ರಮಾಣ ಶೇ.65ರಷ್ಟು ತಗ್ಗಿದೆ.

ಇದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ವಿಶ್ವ ಬ್ಯಾಂಕ್‌ನಿಂದ ಪ್ರಶಸ್ತಿಗೂ ಪಾತ್ರವಾಗಿದೆ. ಕೆಆರ್‌ಡಿಎಲ್‌ ಸಹಾಯಧನದಲ್ಲಿ ನಿರ್ಮಿಸುತ್ತಿರುವ 6 ಕಾಮಗಾರಿಗಳ ಕೆಲಸ ಶೇ.94 ಪೂರ್ಣಗೊಂಡಿದೆ ಎಂದು ತಿಳಿಸಿದರು. ನೆರೆಪೀಡಿತ ಪ್ರದೇಶಗಳಲ್ಲಿ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಬೇಕು. ಈ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್‌, ಕೆಶಿಪ್‌ ಕಾರ್ಯದರ್ಶಿ ಕೆ.ಎಸ್‌.ಕೃಷ್ಣಾರೆಡ್ಡಿ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next