Advertisement

ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಸೂಚನೆ

07:45 AM Jun 20, 2020 | Suhan S |

ಬೀದರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ಮತ್ತು ಕಾಪಿ ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.

Advertisement

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2020ರ ಎಸ್‌ಎಸ್‌ ಎಲ್‌ಸಿ ಪರೀಕ್ಷೆಗಳ ಪೂರ್ವ ಸಿದ್ಧತಾ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ -19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪರೀಕ್ಷೆ ಜಿಲ್ಲಾದ್ಯಂತ ಭಯ ಮುಕ್ತವಾಗಿ ನಡೆಯಬೇಕು. ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆದಲ್ಲಿ ಫಲಿತಾಂಶದಲ್ಲಿ ಬೀದರ ಜಿಲ್ಲೆಗೆ ಉತ್ತಮ ಸ್ಥಾನ ಲಭ್ಯವಾಗಲಿದೆ ಎಂದು ಹೇಳಿದರು.

ಬೀದರ ಜಿಲ್ಲೆಯಲ್ಲಿ ಜೂನ್‌ 25ರಿಂದ ಜುಲೈ 4ರ ವರೆಗೆ ನಡೆಯುವ ಎಸ್‌ಎಸ್‌ ಎಲ್‌ಸಿ ಪರೀಕ್ಷೆಗೆ 26,882 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. 99 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಐ ಎಚ್‌.ಸಿ. ಚಂದ್ರಶೇಖರ ಸಭೆಗೆ ಮಾಹಿತಿ ನೀಡಿದರು. ಕೋವಿಡ್‌-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮಾಸ್ಕ್ಗಳು ಮತ್ತು ಸ್ಯಾನಿಟೈಸರ್‌ ವಿತರಿಸಲಾಗಿದೆ. 200 ವಿದ್ಯಾರ್ಥಿಗಳಿಗೆ ಒಂದರಂತೆ ಥರ್ಮಲ್‌ ಸ್ಕ್ರಿನಿಂಗ್‌ಗಳನ್ನು 99 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ 2ರಂತೆ ಹಾಗೂ ಬ್ಲಾಕ್‌ ಪರೀಕ್ಷಾ ಕೇಂದ್ರಗಳಲ್ಲಿ ಒಂದರಂತೆ 218 ಥರ್ಮಲ್‌ ಸ್ಕ್ರಿನಿಂಗ್‌ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ ಹಾಗೂ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಇನ್ನಿತರ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next