Advertisement

ಹಣ ಬಾರದ ರೈತರ ಮಾಹಿತಿ ಸಲ್ಲಿಸಲು ಸೂಚನೆ

04:27 PM May 27, 2020 | Suhan S |

ಹಿರೇಕೆರೂರ: ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಹಣ ಬರದೇ ಇರುವ ರೈತರ ಮಾಹಿತಿಯನ್ನು ಮೂರು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕೃಷಿ ಅಧಿಕಾರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ ಸೂಚಿಸಿದರು.

Advertisement

ಇಲ್ಲಿನ ತಾಪಂ ಸಭಾಭವನದಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ ಅಧಿಕಾರಿಗಳು ಕಚೇರಿಯಲ್ಲಿದ್ದುಕೊಂಡು ಕೆಲಸ ಮಾಡದೇ, ರೈತರ ಜಮೀನುಗಳಿಗೆ ತೆರಳಿ ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ರೈತ ಸಂಪರ್ಕ ಕೇಂದ್ರಗಳಿಂದ ವಿತರಣೆಯಾಗುವ ಬಿತ್ತನೆ ಬೀಜದ ದಾಸ್ತಾನು ಮತ್ತು ವಿತರಣೆಯ ಸಮಗ್ರ ಮಾಹಿತಿ ದಾಲಿಸಬೇಕು ಎಂದು ಸೂಚಿಸಿದರು.

ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಂದಿಗಳನ್ನು ಹಿಡಿದು ಬೇರೆಡೆಗೆ ಸಾಗಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು, ಈ ವರೆಗೂ ಪಪಂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಕೂಡಲೇ ಹಂದಿಗಳನ್ನು ಸ್ಥಳಾಂತರ ಮಾಡಲು ಸೂಚಿಸಿದರು. ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಿದ್ದರಿಂದ ತಾಲೂಕಿನಲ್ಲಿ ಯಾವುದೇ ಕೋವಿಡ್  ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಶ್ಲಾಘಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಸ್ಥಗಿತಗೊಳ್ಳದಂತೆ ಮುಂಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಉಪವಿಭಾಗಾಧಿಕಾರಿ, ಡಾ| ದಿಲಿಸ್‌ ಶಶಿ, ತಾಪಂ ಅಧ್ಯಕ್ಷ ರಾಜು ಬಣಕಾರ, ಜಿಪಂ ಸದಸ್ಯರಾದ ಎಸ್‌.ಕೆ. ಕರಿಯಣ್ಣನವರ, ಶಿವರಾಜ ಹರಿಜನ, ಸುಮಿತ್ರಾ ಪಾಟೀಲ, ಮಾದೇವಕ್ಕ ಗೋಪಕ್ಕಳ್ಳಿ, ತಹಶೀಲ್ದಾರ್‌ ಆರ್‌.ಎಚ್‌. ಭಾಗವಾನ್‌, ಕೆ.ಗುರುಬಸವರಾಜ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಎಚ್‌.ಜಿ., ಮೋಹನಕುಮಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next