Advertisement

ಪಶು ವೈದ್ಯಾಧಿಕಾರಿಗಳಿಂದ ಕನ್ನಡ ರಾಜ್ಯೋತ್ಸವಕ್ಕೆ ಅವಮಾನ

04:49 PM Nov 01, 2021 | Team Udayavani |

ಗುಡಿಬಂಡೆ: ಪಟ್ಟಣದ ಪಶು ಆಸ್ಪತ್ರೆಯಲ್ಲಿ ಧ್ವಜಾರೋಹಣ ಮಾಡದೇ, ಕನ್ನಡ ರಾಜ್ಯೋತ್ಸವಕ್ಕೆ ಅವಮಾನ ಎಸಗಿದ್ದಾರೆ ಎಂದು ರೈತ ಸಂಘದ ವರದರಾಜು ದೂರಿದ್ದಾರೆ.

Advertisement

66ನೇ ಕನ್ನಡ ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದ್ದರೆ, ಇತ್ತ ಪಶು ಆಸ್ಪತ್ರೆಯಲ್ಲಿ ಮಾತ್ರ ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಆರೋಹಣೆ ಮಾಡದೇ ಕನ್ನಡಕ್ಕೆ ಅವಮಾನ ಮಾಡಿದ್ದಾರೆ ಎಂದು ದೂರಿದ್ದಾರೆ.

ಕಾಟಚಾರಕ್ಕೆ ಮಾತ್ರ ದೀಪಾಲಾಂಕಾರ ಮಾಡಿದ್ದಾರೆ ಹೊರತು, ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿರುವುದಿಲ್ಲ, ಕೂಡಲೇ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳು ಇವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next