Advertisement

ಕೊರಗಜ್ಜ ದೈವಕ್ಕೆ ಅವಮಾನ ಪ್ರಕರಣ: ಪ್ರಮುಖ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು

03:35 PM Feb 04, 2022 | Team Udayavani |

ವಿಟ್ಲ: ಸಾಲೆತ್ತೂರು ಅಗರಿಯಲ್ಲಿನ ವಧುವಿನ ಮನೆಗೆ ಬರುವ ಸಂದರ್ಭ ವರನು ಕೊರಗಜ್ಜ ದೈವವನ್ನು ಹೋಲುವ ರೀತಿಯ ವೇಷ ಭೂಷಣದ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ.

Advertisement

ಕೇರಳ ಉಪ್ಪಳ ಅಗರ್ತಿಮೂಲ ಉಮರುಲ್ ಭಾಷಿತ್ (28) ಬಂಧಿತ. ಹಿಂದೂ ಸಂಘಟನೆಗಳಿಂದ ಪ್ರತಿಭಟನೆಗಳು ನಡೆದ ಸಂದರ್ಭ ಪುತ್ತೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ಕುಂಬಳೆ ಮಂಗಳಪಾಡಿ ನಿವಾಸಿ ಅಹ್ಮದ್ ಮುಜಿತಾಬು (28), ಗಾಳಿಯಡ್ಕ ಬಾಯಾರುಪದವು ನಿವಾಸಿ ಮೊಯ್ದೀನ್ ಮುನಿಶ್ (19) ಬಂಧಿಸಲಾಗಿತ್ತು. ಪ್ರಮುಖ ಆರೋಪಿಯ ಜಾಮೀನು ಅರ್ಜಿಯನ್ನು ಇತ್ತೀಚಿಗೆ ನ್ಯಾಯಾಲಯ ವಜಾ ಮಾಡಿದ ಹಿನ್ನಲೆಯಲ್ಲಿ ಪೊಲೀಸರಿಗೆ ಬಂಧನ ಮಾಡುವ ಅನಿವಾರ್ಯತೆ ಎದುರಾಗಿತ್ತು.

ಇದನ್ನೂ ಓದಿ:ಹಿಜಾಬ್ ವಿವಾದ: ತಾಲಿಬಾನ್ ಮಾಡುವುದಕ್ಕೆ ಬಿಡುವುದಿಲ್ಲ; ಸಚಿವ ಸುನೀಲ್ ಕಿಡಿ

ಕೊಳ್ನಾಡು ಗ್ರಾಮದ ಅಬ್ದುಲ್ ಅಝೀಝ್ ಅವರ ಪುತ್ರಿ ಮದುವೆ ದಿನ ಮುಸ್ಲಿಂ ಸಂಪ್ರದಾಯದಂತೆ ವರ ಸ್ನೇಹಿತರ ಜತೆಗೆ ವಧುವಿನ ಮನೆಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜ ದೈವವನ್ನು ಹೋಲುವ ವೇಷ ಭೂಷಣ ಧರಿಸಿದ ದೃಶ್ಯವನ್ನು ವರನ ಕಡೆಯವರೇ ಸೆರೆ ಹಿಡಿದಿದ್ದು, ವೈರಲ್ ಆಗಿತ್ತು.

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕಾರ ಪ್ರಕರಣ ದಾಖಲಾಗಿತ್ತು

Advertisement
Advertisement

Udayavani is now on Telegram. Click here to join our channel and stay updated with the latest news.

Next