ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿನ ಮದುವೆ ಮನೆಯಲ್ಲಿ ಮುಸ್ಲಿಂ ಸಮುದಾಯದ ವರನು ಹಿಂದೂಗಳ ಆರಾಧ್ಯ ದೈವ ಸ್ವಾಮಿ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮಂಗಲ್ಪಾಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28 ವ) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19 ವ) ಬಂಧಿತ ಆರೋಪಿಗಳು.
ಇದನ್ನೂ ಓದಿ: ಬಂಟ್ವಾಳ: ರುಂಡ- ಮುಂಡ ಬೇರ್ಪಟ್ಟ ಮೃತದೇಹ ಪತ್ತೆ !
ಹಿ.ಜಾ.ವೇ ವಿಟ್ಲ ಬಂದ್ ಗೆ ಕರೆ ನೀಡಿದ್ದು, ಇದರ ನಡುವೇ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.