Advertisement

ಕೊರಟಗೆರೆ: ಕಸದ ಬುಟ್ಟಿಯಲ್ಲಿ ಹಾರಿದ ರಾಷ್ಟ್ರಧ್ವಜ; ಸಾರ್ವಜನಿಕರ ಆಕ್ರೋಶ

06:10 PM Aug 14, 2022 | Team Udayavani |

ಕೊರಟಗೆರೆ: ತಾಲೂಕಿನ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆಯಂತೆ 13 ರಿಂದ 15 ರ ವರೆಗೂ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜಗಳನ್ನು ಹಾರಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ.

Advertisement

ಆದರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಕಚೇರಿಯ ಕಟ್ಟಡದ ಮೇಲೆ ಕಸದ ಬುಟ್ಟಿಯಲ್ಲಿ ತಿರಂಗ  ಧ್ವಜವನ್ನು  ಹಾರಿಸಿರುವ ಅಧಿಕಾರಿಗಳ ನಡೆಗೆ  ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಕೊರಟಗೆರೆ ತಾಲೂಕಿನ ಬುಕ್ಕ ಪಟ್ಟಣ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಆಗೌರವ ತಂದಿದ್ದು ಇಂತಹ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next