Advertisement

ಉ.ಕ.ಹೋರಾಟ: ಮಠಾಧೀಶರ ಧರಣಿ ಇಂದು

06:00 AM Jul 31, 2018 | |

ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು. ಸುವರ್ಣ ವಿಧಾನಸೌಧಕ್ಕೆ ಸರಕಾರದ ಮುಖ್ಯ ಕಚೇರಿಗಳು ಸ್ಥಳಾಂತರವಾಗಿ ಈ ಭಾಗದ ಪ್ರಗತಿಗೆ ಇದು ಶಕ್ತಿ ಕೇಂದ್ರವಾಗಬೇಕು ಎಂಬ ಬೇಡಿಕೆಗಳೊಂದಿಗೆ ಇಂದು
(ಜು.31) ವಿವಿಧ ಮಠಾಧೀಶರು ಸುವರ್ಣ ವಿಧಾನಸೌಧದ ಎದುರು ಸಾಂಕೇತಿಕ ಧರಣಿ ನಡೆಸಲಿದ್ದಾರೆ.

Advertisement

ನಾಗನೂರು ರುದ್ರಾಕ್ಷಿಮಠದ ಡಾ.ಸಿದ್ಧರಾಮ ಸ್ವಾಮಿಗಳು, ನಿಡಸೋಸಿಯ ಪಂಚಮಲಿಂಗೇಸ್ವರ ಸ್ವಾಮೀಜಿ, ಹುಕ್ಕೇರಿ
ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಸೇರಿ ಉ.ಕ.ಭಾಗದ 50 ಕ್ಕೂ ಹೆಚ್ಚು ಮಠಾಧೀಶರು ಬೆಳಗ್ಗೆ
11 ರಿಂದ ಮಧ್ಯಾಹ್ನ 2 ರವರೆಗೆ ಧರಣಿಯಲ್ಲಿ ಭಾಗವಹಿಸಲಿದ್ದಾರೆ.

ಮಠಾಧೀಶರ ಜೊತೆಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿರುವ ಬಿಜೆಪಿ
ಶಾಸಕರಾದ ಉಮೇಶ ಕತ್ತಿ, ಪಿ. ರಾಜೀವ, ಎ.ಎಸ್‌. ಪಾಟೀಲ ನಡಹಳ್ಳಿ ಧರಣಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕ ವಿಕಾಸ ವೇದಿಕೆ, ಉತ್ತರ ಕರ್ನಾಟಕ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು
ಬೆಂಬಲ ವ್ಯಕ್ತಪಡಿಸಿವೆ.

ಈ ಮಧ್ಯೆ, ಧರಣಿ ಸತ್ಯಾಗ್ರಹದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಧ್ವಜ ಹಾರಿಸುವ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಮಠಾಧೀಶರೊಂದಿಗೆ ಚರ್ಚೆ ಮಾಡಿ ಅವರ ಅಭಿಪ್ರಾಯದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಹಾಗೂ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.

ಧರಣಿ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಬಳಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಲಾಗುತ್ತಿದೆ. ಸತ್ಯಾಗ್ರಹಕ್ಕೆ
ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಅನುಮತಿ ನೀಡಲಾಗಿದೆ. ಆದರೆ ಇದೇ ವೇಳೆ ಪ್ರತ್ಯೇಕ ರಾಜ್ಯದ
ಧ್ವಜಾರೋಹಣ ಮಾಡುವ ಬಗ್ಗೆ ಯಾರೂ ಅನುಮತಿ ಪಡೆದುಕೊಂಡಿಲ್ಲ. ಧರಣಿಗೆ ಅನುಮತಿ ಕೊಡುವ ವೇಳೆ ಈ
ವಿಷಯ ಪ್ರಸ್ತಾಪ ಆಗಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಡಿ.ಸಿ. ರಾಜಪ್ಪ ಉದಯವಾಣಿಗೆ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next