ಅಂಕೋಲಾ: ಸಮಾಜಘಾತುಕ ವ್ಯಕ್ತಿಗಳು, ಭಯೋತ್ಪಾದಕರ ದಾಳಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ತಾಲೂಕಿನ ವಿವಿಧೆಡೆ ಮಂಗಳವಾರ ಸಾಗರ ಕವಚ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು.
ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಬ್ಯಾಗ್ ಪರಿಶೀಲನೆ ನಡೆಸಿದರು.
ತಾಲೂಕಿನಲ್ಲಿ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಈ ಕಾರ್ಯಾಚರಣೆ ನಡೆಸುತ್ತಿದೆ.
ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ತಾಲೂಕಿನ ಬಸ್ ನಿಲ್ದಾಣ, ಹಟ್ಟಿಕೇರಿ ಸುಂಕ ವಸೂಲಿ ಕೇಂದ್ರ, ರೈಲ್ವೆ ನಿಲ್ದಾಣ, ಪ್ರಮುಖ ದೇವಸ್ಥಾನ ಬೇಲೆಕೇರಿ ಬಂದರು, ಅಂಚೆ ಕಚೇರಿ ಮತ್ತು ಹೆದ್ದಾರಿಯಲ್ಲಿ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲನೆ ಮಾಡಿದರು. ಸಿಪಿಐ ಸಂತೋಷ ಶೆಟ್ಟಿ, ಪಿಎಸ್‌ಐ ಪ್ರವೀಣ ಕುಮಾರ ಮತ್ತು ಮಹಾಂತೇಶ ಸೇರಿದಂತೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯು ಬುಧವಾರವು ಮುಂದುವರಿಯಲಿದೆ.