Advertisement

ಮುಂಬಯಿಯಲ್ಲಿ ವರುಣನ ಆರ್ಭಟ ; ರಸ್ತೆಗಳು, ತಗ್ಗುಪ್ರದೇಶಗಳು ಜಲಾವೃತ

02:06 AM Jul 04, 2020 | Hari Prasad |

ಮುಂಬಯಿ: ಕೋವಿಡ್ 19 ಸೋಂಕಿನ ಹೊಡೆತಕ್ಕೆ ಸಿಲುಕಿ ನಲುಗುತ್ತಿರುವ ಮುಂಬಯಿಗೆ ಶುಕ್ರವಾರ ಮಳೆ ಆಘಾತ ನೀಡಿದೆ.

Advertisement

ಗುರುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಗುರುವಾರ ರಾತ್ರಿ 8.30ರಿಂದ 12 ಗಂಟೆಗಳ ಕಾಲ ಸತತ ಮಳೆ ಸುರಿದಿದೆ. ಈ ವಾರಾಂತ್ಯ ಇನ್ನಷ್ಟು ಮಳೆಯಾಗುವ ನಿರೀಕ್ಷೆಯಿದ್ದು, ಮುಂದಿನ 2 ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಕಳೆದ ತಿಂಗಳು ನಿಸರ್ಗ ಚಂಡಮಾರುತದ ಅಬ್ಬರಕ್ಕೆ ಸಿಲುಕಿದ್ದ ರತ್ನಗಿರಿ ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯಾಗಿದ್ದು, ಶನಿವಾರ ರಾಯಗಡ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದೂ ಇಲಾಖೆ ಎಚ್ಚರಿಸಿದೆ.

ಹವಾಮಾನ ಇಲಾಖೆಯ ಎಚ್ಚರಿಕೆಯ ಮೇರೆಗೆ, ತುರ್ತು ಅಗತ್ಯಗಳ ಹೊರತಾಗಿ ನಾಗರಿಕರು ಮನೆಗಳಿಂದ ಹೊರಬರದಂತೆ ಮುಂಬಯಿ ಪೊಲೀಸರು ಸಲಹೆ ನೀಡಿದ್ದಾರೆ.

Advertisement

ಬಿಸಿಲಿನ ಝಳ ಹೆಚ್ಚಿರುವ‌ ದೆಹಲಿ ಮತ್ತು ಗುಜರಾತ್‌ನಲ್ಲೂ ಶನಿವಾರ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ರಾಜಸ್ಥಾನದಲ್ಲಿ ಬಿಸಿಗಾಳಿ ಮುಂದುವರಿಯಲಿದ್ದು, ಮಳೆ ವಿಳಂಬವಾಗಲಿದೆ ಎಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next