Advertisement

ಬಡ್ಡಿರಹಿತ ಸಾಲ ಸೌಲಭ್ಯ

09:12 AM Jul 18, 2020 | Suhan S |

ಶಿಡ್ಲಘಟ್ಟ: ಕ್ಷೇತ್ರದ ಪ್ರತಿಯೊಬ್ಬ ಮಹಿಳೆಯರಿಗೆ ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ರೂಪಿಸ ಲಾಗಿದ್ದು, ಹಂತ ಹಂತವಾಗಿ ಅನುಷ್ಠಾನ ಗೊಳಿಸಲಾಗುವುದು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಫಲಾನು ಭವಿಗಳಿಗೆ ಸಹಾಯಧನದ ಚೆಕ್‌ ವಿತರಿಸಿ ಮಾತನಾಡಿದ ಅವರು, ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಡಿಸಿಸಿ ಬ್ಯಾಂಕ್‌ ಮೂಲಕ ಮಹಿಳಾ  ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ನೀಡಲಾಗುತ್ತದೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮತ್ತು ಆಡಳಿತ ಮಂಡಳಿಯ ನಿರ್ದೇಶಕರ ಸಹಕಾರದಿಂದ ಕ್ಷೇತ್ರದ ಮಹಿಳೆಯರಿಗೆ ಬಡ್ಡಿರಹಿತ ಸಾಲ ಸೌಲಭ್ಯ ಯೋಜನೆಗೆ ಚಾಲನೆ ನೀಡಿ ಕೋಟ್ಯಂತರ ರೂ.ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸೌಲಭ್ಯ ವಿಸ್ತರಣೆಯಾಗಲಿದೆ ಎಂದು ಭರವಸೆ ನೀಡಿದರು.

ಸಿಡಿಪಿಒ ವೈ. ನಾಗವೇಣಿ, ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷಕಿ ಎ.ಸಿ.ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲೆಕ್ಕಾಧಿಕಾರಿ ಮಮತಾ, ಶಾಸಕರ ಆಪ್ತ ಕಾರ್ಯದರ್ಶಿ ನಾರಾಯಣಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next