Advertisement

ಬಡ್ಡಿ ರಹಿತ ಸಾಲ ಆರ್ಥಿಕ ಪ್ರಗತಿಗೆ ಪೂರಕ

06:43 AM Jun 21, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯ ವಾಹಿನಿ  ಯಲ್ಲಿ ಗುರುತಿಸಿಕೊಳ್ಳಬೇಕು ಎಂಬ ಉದ್ದೇಶ  ದಿಂದ ರಾಜ್ಯ ಸರ್ಕಾರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ.ವರೆಗಿನ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಡಿಸಿಸಿ ಬ್ಯಾಂಕ್‌ ವತಿಯಿಂದ ಹಮ್ಮಿಕೊಂಡಿದ್ದ ಸ್ತ್ರೀ ಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ಸರ್ಕಾರವೇ ಬಡ್ಡಿ ಭರಿಸಲಿದೆ: ಶೂನ್ಯ ಬಡ್ಡಿರಹಿತ ಸಾಲವನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಜೀವನ ನಿರ್ವ  ಹಣೆ ಉತ್ತಮ ಪಡಿಸಿಕೊಳ್ಳಬೇಕು. ಡಿಸಿಸಿ  ಬ್ಯಾಂಕ್‌ನಿಂದ ನೀಡುತ್ತಿರುವ ಸಾಲಕ್ಕೆ ಸರ್ಕಾರವೇ ಬಡ್ಡಿ ಭರಿಸುತ್ತದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ಯೋಜನೆ ಜಾರಿಗೆ ಬಂದಿದ್ದು, ಇದು ಮಹಿಳೆಯರಿಗೆ ಮೋದಿ  ನೀಡಿರುವ ಕೊಡುಗೆ ಅಪಾರ ಎಂದು ತಿಳಿಸಿದರು.

ಎಚ್ಚರ ವಹಿಸಿ: ಕೋವಿಡ್‌ 19 ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಬಳಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಕೋವಿಡ್‌ 19 ನಿಗ್ರಹ ಮಾಡಬಹುದು. 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ  ಹೃದಯ ಸಂಬಂಧಿ, ಸಕ್ಕರೆ ಕಾಯಿಲೆ ಇರುವಂತಹ ವ್ಯಕ್ತಿಗಳಿಗೆ ಕೋವಿಡ್‌ 19 ಸೋಂಕು ಹರಡದಂತೆ ಎಚ್ಚರ ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ  ದ್ಯಾವಪ್ಪ, ವೇದ ಸುದರ್ಶನ್‌, ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ರಾದ ಜ್ಯೋತಿ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ನಾಗೇಶ್‌, ಎಪಿಎಂಸಿ ಅಧ್ಯಕ್ಷ ನಾರಾಯಣ ಸ್ವಾಮಿ, ಕೆ.ವಿ.ನಾಗ ರಾಜ್‌, ಮರಳುಕುಂಟೆ  ಕೃಷ್ಣಮೂರ್ತಿ ಸೇರಿ ದಂತೆ ಮತ್ತಿತರರು ಉಪಸ್ಥಿತರಿದ್ದರು.

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಆರ್ಥಿಕ ಚೈತನ್ಯ ತುಂಬುದಕ್ಕೆ ಶೂನ್ಯ ಬಡ್ಡಿದರ ಸಾಲ ಯೋಜನೆ ಮಹಿಳೆಯರಿಗೆ ಸಹಕಾರಿಯಾಗಲಿದೆ. ಸಾಲವನ್ನು ದುಂದು ವೆಚ್ಚ ಅಥವಾ ದುರುಪಯೋಗ ಮಾಡಿಕೊಳ್ಳದೆ ಕುರಿ,  ಮೇಕೆ, ಹಸು ಸಾಕಾಣಿಕೆಗೆ ಉಪಯೋಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. 
-ಡಾ.ಕೆ.ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next