Advertisement

ಕುತೂಹಲ ಮೂಡಿಸಿದ ಬಿಜೆಪಿ ಮೌನ

07:40 AM Jul 26, 2017 | Harsha Rao |

ಬೆಂಗಳೂರು: ವೀರಶೈವ- ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂಬ ಪ್ರಸ್ತಾಪದ ಬಗ್ಗೆ
ರಾಜ್ಯಾದ್ಯಂತ ಗಂಭೀರ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ ಮುಖಂಡರು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿರುವುದು
ಕುತೂಹಲ ಮೂಡಿಸಿದೆ.

Advertisement

ರಾಜ್ಯ ಕಾಂಗ್ರೆಸ್‌ ಸರ್ಕಾರದ ಈ ಪ್ರಸ್ತಾಪದಿಂದ ತಕ್ಷಣ ಪ್ರಚೋದನೆಗೆ ಒಳಗಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವುದಕ್ಕಿಂತ ಸದ್ಯದ ಮಟ್ಟಿಗೆ ಮೌನವನ್ನೇ ಮುಂದುವರಿಸಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಸರ್ಕಾರದ ಈ ನಡೆಯಿಂದ ಪಕ್ಷ ಯಾವುದೇ ರೀತಿಯಿಂದಲೂ ಪ್ರಚೋದನೆಗೆ ಒಳಗಾಗಬಾರದು. ಈ ಬಗ್ಗೆ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡದಿರಲು ಬಿಜೆಪಿ ಹಿರಿಯ ಮುಖಂಡರು ನಿರ್ಧರಿಸಿದ್ದಾರೆ. ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಪ್ರಸ್ತಾಪಿಸಿರುವ ಈ ತಂತ್ರಕ್ಕೆ ತೆರೆಮರೆಯಲ್ಲೇ ಪ್ರತಿತಂತ್ರ ಹಣೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾಮಾನ್ಯವಾಗಿ ಆಡಳಿತಾರೂಢ ಕಾಂಗ್ರೆಸ್‌ ಏನಾದರೂ ವಿವಾದಾತ್ಮಕ ವಿಚಾರ ಪ್ರಸ್ತಾಪಿಸಿದಾಗ ಬಿಜೆಪಿ ಮುಗಿ
ಬೀಳುತ್ತಿತ್ತು. ಆ ಪಕ್ಷದ ಮುಖಂಡರು ಪೈಪೋಟಿಗೆ ಬಿದ್ದವರಂತೆ ಪ್ರತಿಕ್ರಿಯೆ, ಪ್ರತ್ಯಾರೋಪ ಮಾಡುತ್ತಿದ್ದರು. ಆದರೆ, ವೀರಶೈವ- ಲಿಂಗಾಯಿತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ವಿಚಾರ ರಾಜ್ಯದಲ್ಲಿ ಸಂಚಲನ ಮೂಡಿಸಿ, ಪರ- ವಿರೋಧ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡದಿರುವುದು ಅಚ್ಚರಿ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next