Advertisement

ಡಿಕೆಶಿ ತಾಯಿ ವಿರುದ್ಧದ ನೋಟಿಸ್‌ಗೆ ಮಧ್ಯಂತರ ತಡೆ

10:50 PM Jun 28, 2019 | Team Udayavani |

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಾಯಿ ಗೌರಮ್ಮ ಅವರಿಗೆ ಸೇರಿದ್ದ ಆಸ್ತಿಯನ್ನು ಜಪ್ತಿ ಮಾಡಲು ಆದಾಯ ತೆರಿಗೆ ಇಲಾಖೆ ಜಾರಿ ಮಾಡಿದ್ದ ನೋಟಿಸ್‌ಗೆ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

Advertisement

ಆದಾಯ ತೆರಿಗೆ ಇಲಾಖೆಯ ನೋಟಿಸ್‌ ಪ್ರಶ್ನಿಸಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಆಸ್ತಿ ಜಪ್ತಿ ಕುರಿತು ನೋಟಿಸ್‌ ಹಾಗೂ ಆ ಕುರಿತ ಮುಂದಿನ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿತು. ಅಲ್ಲದೆ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಆದಾಯ ತೆರಿಗೆ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿತು.

ಸಚಿವ ಡಿ.ಕೆ. ಶಿವಕುಮಾರ್‌ ತಮ್ಮ ತಾಯಿ ಗೌರಮ್ಮ ಹೆಸರಿನಲ್ಲಿ ನೂರಾರು ಕೋಟಿ ಬೇನಾಮಿ ಆಸ್ತಿ ಹೊಂದಿದ್ದಾರೆಂಬ ಕಾರಣ ನೀಡಿ ಗೌರಮ್ಮ ಅವರ ಆಸ್ತಿ ಜಪ್ತಿಗೆ ಐಟಿ ಇಲಾಖೆ ಮುಂದಾಗಿತ್ತು. ಆ ಸಂಬಂಧ ಐಟಿ ಇಲಾಖೆಯ ಉಪ ಆಯುಕ್ತರು “ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ 1988ರ ಸೆಕ್ಷನ್‌ 21 (10) ಅನುಸಾರ ಗೌರಮ್ಮ ಅವರಿಗೆ ಮೇ 8ರಂದು ನೋಟಿಸ್‌ ಜಾರಿಗೊಳಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next