Advertisement

ಆದಾಯ ತೆರಿಗೆ ಪಾವತಿದಾರರಿಗೆ ರಿಲೀಫ್: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ

06:50 AM Feb 01, 2019 | Sharanya Alva |

ನವದೆಹಲಿ: 2018-19ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಭರ್ಜರಿ ಕೊಡುಗೆಗಳನ್ನು ಘೋಷಿಸಲಾಗಿದೆ. ಆದಾಯ ತೆರಿಗೆ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷದವರೆಗೆ ತೆರಿಗೆ ವಿನಾಯ್ತಿ ಘೋಷಿಸಿದೆ. ಅಷ್ಟೇ ಅಲ್ಲ ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷದವರೆಗೆ ಹೂಡಿಕೆಗೆ ಅವಕಾಶ ಇದೆ. ಇದರಿಂದಾಗಿ ಒಟ್ಟು 6.5 ಲಕ್ಷದವರೆಗೆ ತೆರಿಗೆ ಪಾವತಿಸಬೇಕಾಗಿಲ್ಲ.

Advertisement

ಈ ಹಿಂದಿನ ಪೂರ್ಣ ಪ್ರಮಾಣದ ಬಜೆಟ್ ನಲ್ಲಿ ವೈಯಕ್ತಿಕ ಆದಾರ ತೆರಿಗೆ ಮಿತಿಯನ್ನು ಹೆಚ್ಳ ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಈ ಬಾರಿಯ ಮಧ್ಯಂತರ ಬಜೆಟ್ ನಲ್ಲಿಯೂ ಕೂಡಾ ವೈಯಕ್ತಿಕ ಆದಾಯ ತೆರಿಗೆ ಮಿತಿ 5 ಲಕ್ಷಕ್ಕೆ ಏರಿಕೆ ಮಾಡುತ್ತಾರೆಂಬ ನಿರೀಕ್ಷೆ ಈ ಬಾರಿ ಈಡೇರಿದೆ.

ಈ ಬಾರಿಯೂ ತೆರಿಗೆ ಮಿತಿಯಲ್ಲಿ ಹೆಚ್ಚಳ ಇಲ್ಲ ಎಂದೇ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ತೆರಿಗೆ ಮಿತಿಯನ್ನು 2.5ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಳ ಮಾಡಿರುವುದಾಗಿ ಘೋಷಿಸಿದಾಗ ಕಲಾಪದಲ್ಲಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.

ಅಷ್ಟೇ ಅಲ್ಲ ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷದವರೆಗೆ ಹೂಡಿಕೆಗೆ ಅವಕಾಶ ಇದೆ.  ಗೃಹ ಸಾಲ 2 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿದೆ. ಸ್ಟ್ಯಾಂಡರ್ಡ್ ಡಿಡಕ್ಷನ್ 40 ಸಾವಿರದಿಂದ 50 ಸಾವಿರಕ್ಕೆ ಏರಿಕೆ.

Advertisement

Udayavani is now on Telegram. Click here to join our channel and stay updated with the latest news.

Next