ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಬದಲಿಗೆ ಹಂಗಾಮಿ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಲೋಕಸಭೆಯಲ್ಲಿ ಬರೋಬ್ಬರಿ ಒಂದೂವರೆ ಗಂಟೆಗಳ ಕಾಲ ಬಜೆಟ್ ಭಾಷಣ ಓದಿದರು. ನಿರೀಕ್ಷೆಯಂತೆ ಮಧ್ಯಮ ವರ್ಗಕ್ಕೆ, ತೆರಿಗೆದಾರರಿಗೆ, ಕಾರ್ಮಿಕ ಸಂಘಟನೆ, ಅಂಗನವಾಡಿ ಸೇರಿದಂತೆ ಬಹುತೇಕ ಪ್ರಮುಖ ಕ್ಷೇತ್ರಗಳಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ. ಕೇಂದ್ರ ಬಜೆಟ್ ನ ಕ್ಷಣ, ಕ್ಷಣದ ಮಾಹಿತಿಯ ಪ್ರಮುಖ ಅಂಶ ಇಲ್ಲಿದೆ.
*ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಬಜೆಟ್
*ರಾಷ್ಟ್ರಪತಿ ಭವನದಿಂದ ತೆರಳಿದ ಪಿಯೂಷ್ ಗೋಯಲ್
*ಕೆಲವೇ ಹೊತ್ತಿನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ