ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್ ಎಸ್ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.
ಇಂದು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಕೇಶವ ಕೃಪಾಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಇದನ್ನೂ ಓದಿ:Soft Signal ನಿಯಮವನ್ನೇ ತೆಗೆದು ಹಾಕಿದ ICC: ಏನಿದು ಸಾಫ್ಟ್ ಸಿಗ್ನಲ್? ಇಲ್ಲಿದೆ ಡಿಟೈಲ್ಸ್
ಇಂದು ಆರ್ ಎಸ್ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆಯಾಗಿದೆ.
ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದರು.