Advertisement

ವಿಧಾನಸಭೆಗೆ  ಶೀಘ್ರವೇ ಮಧ್ಯಂತರ ಚುನಾವಣೆ: ಜೆಕೆ ಕೃಷ್ಣಾರೆಡ್ಡಿ ಭವಿಷ್ಯ

09:40 AM Sep 14, 2019 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದ ವಿಧಾನಸಭೆಗೆ ಶೀಘ್ರವೇ ಮಧ್ಯಂತರ ಚುನಾವಣೆ ನಡೆಯಲಿದೆಯೆಂದು ವಿಧಾನಸಭಾ ಉಪಸಭಾಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ ಭವಿಷ್ಯ ನುಡಿದ್ದಿದ್ದಾರೆ.

Advertisement

ಜಿಲ್ಲೆಯ ಚಿಂತಾಮಣಿ ವಿಧಾನ ಸಭಾ ಕ್ಷೇತ್ರದ ಸಿದ್ದ ಮಠದಲ್ಲಿ ಶುಕ್ರವಾರ ಅಲ್ಪಸಂಖ್ಯಾತರ ಘಟಕದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ಪೀಕರಿಸಿ ಮಾತನಾಡಿದರು.

ಇಂದಿನ ರಾಜ್ಯದ ರಾಜಕೀಯ ಸ್ಥಿತಿಯನ್ನು ಅವಲೋಕಿಸಿದರೆ ಬಿಜೆಪಿ ಸರ್ಕಾರಕ್ಕೆ ಹೆಚ್ಚು ಆಯಸ್ಸು ಇಲ್ಲ ಎಂದರು. ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.

ಕ್ಷೇತ್ರದ ಅಭಿವೃದ್ಧಿ ಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಕೊಟ್ಟ ಭರವಸೆಗಳನ್ನು ಈಡೇಸಿದ್ದೇನೆ. ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಇವೆ. ಮೈತ್ರಿ ಸರ್ಕಾರದಲ್ಲಿ ಕ್ಷೇತ್ರದಲ್ಲಿ ೭೪ ಕೋಟಿ ವೆಚ್ಚದ ಕಾಮಗಾರಿಗಳಿಗೆ ಬೇಡಿಕೆ ಪಟ್ಟಿ ಸಲ್ಲಿಸಲಾಗಿತ್ತು. ಸಿಎಂ ಆಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಮುಂದುವರೆದಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗುತ್ತಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next