Advertisement

ಫ‌ಲಿತಾಂಶ ಪ್ರಕಟಿಸಿದಂತೆ ತಡೆ ಆದೇಶ: ಚುನಾವಣಾ ಆಯೋಗದಿಂದ ಮೇಲ್ಮನವಿ

11:50 PM Dec 10, 2021 | Team Udayavani |

ಬೆಂಗಳೂರು: ನ್ಯಾಯಾಲಯದ ಅನುಮತಿ ಇಲ್ಲದೆ ವಿಧಾನಪರಿಷತ್ತಿನ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯ ಫ‌ಲಿತಾಂಶವನ್ನು ಪ್ರಕಟಿಸಬಾರದು ಎಂದು ಹೊರಡಿಸಲಾದ ಆದೇಶದ ವಿರುದ್ಧ ಚುನಾವಣಾ ಆಯೋಗ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

Advertisement

ನ್ಯಾಯಾಲಯದ ಅನುಮತಿ ಇಲ್ಲದೆ ಚುನಾವಣಾ ಫ‌ಲಿತಾಂಶ ಪ್ರಕಟಿಸಬಾರದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ (ಡಿ.9) ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಚುನಾವಣಾ ಆಯೋಗದಿಂದ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಶುಕ್ರವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಅವರು ಚುನಾವಣಾ ಆಯೋಗದ ಪರ ಹಾಜರಾಗಿ, ತುರ್ತು ಇರುವುದರಿಂದ ಮೇಲ್ಮನವಿಯನ್ನು ಇಂದೇ (ಶುಕ್ರವಾರ) ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ವಿಧಾನಪರಿಷತ್ತಿನ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕಿನ ವಿಚಾರವಾಗಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯಲ್ಲಿ. ನಾಮನಿರ್ದೇಶಿತ ಸದಸ್ಯರಿಗೆ ಮತದಾನದಕ್ಕೆ ಅವಕಾಶ ಮಾಡಿಕೊಟ್ಟಿರುವ ಏಕಸದಸ್ಯ ನ್ಯಾಯಪೀಠ, ಕೋರ್ಟ್‌ ಅನುಮತಿ ಇಲ್ಲದೆ ಫ‌ಲಿತಾಂಶ ಪ್ರಕಟಿಸಬಾರದು ಎಂದು ಹೇಳಿದೆ.

ಇದನ್ನೂ ಓದಿ:ನೆರವಿಗೆ ಬಂದ ಭಾರತೀಯ ವಿಕಾಸ ಟ್ರಸ್ಟ್; ಯಕ್ಷ ಕಲಾವಿದನ ಬದುಕಲ್ಲಿ ಬೆಳಕು!

Advertisement

ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ಕೊನೆ ಕ್ಷಣದಲ್ಲಿ ಈ ತೀರ್ಪು ನೀಡಲಾಗಿದೆ. ಉಳಿದ 19 ಕ್ಷೇತ್ರಗಳ ಫ‌ಲಿತಾಂಶದ ವಿಚಾರದಲ್ಲೂ ಇದೇ ಆದೇಶ ಪಾಲಿಸುವಂತೆ ಕೆಲ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿವೆ. ಈ ರೀತಿ ಆದರೆ, ನಿಗದಿತ ಚುನಾವಣಾ ವೇಳಾಪಟ್ಟಿಯಲ್ಲಿ ಹಸ್ತಕ್ಷೇಪ ಮಾಡಿದಂತಾಗುತ್ತದೆ. ಡಿ.14ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫ‌ಲಿತಾಂಶ ಪ್ರಕಟಿಸಬೇಕಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಏಕಸದಸ್ಯ ನ್ಯಾಯಪೀಠದ ಆದೇಶದಿಂದ ಚುನಾವಣೆಗೆ ಅಡ್ಡಿ ಆಗಿಲ್ಲ. ನಿಗದಿಯಂತೆ ಚುನಾವಣೆ ನಡೆದಿದೆ. ಮತ ಎಣಿಕೆ ಡಿ.14ರಂದು ನಡೆಯಲಿದೆ. ಇನ್ನೂ ಸಮಯ ಇದೆ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ, ಡಿ.13ರಂದು ಮೇಲ್ಮನವಿಯ ವಿಚಾರಣೆ ನಡೆಸುವುದಾಗಿ ತಿಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next