Advertisement

ಅಂತಿಮ ಕ್ಷಣದಲ್ಲಿ ʼಸಿದ್ದು ನಿಜಕನಸುʼ ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆ

04:47 PM Jan 09, 2023 | Team Udayavani |

ಬೆಂಗಳೂರು : ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್‌ ಕೋರ್ಟ್‌ ತಡೆ ನೀಡಿದೆ.  ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದರು.

Advertisement

ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ಅಲ್ಪಸಂಖ್ಯಾತರ ಓಲೈಕೆ, ಪಿಎಫ್ ಐ ವಿರುದ್ಧ ಪ್ರಕರಣ ವಾಪಾಸ್ ಸೇರಿದಂತೆ ಹಲವಾರು ವಿಚಾರಗಳನ್ನು ಈ ಪುಸ್ತಕದಲ್ಲಿ ನಮೂದಿಸಲಾಗಿದ್ದು, ಅಂದಿನ ಟಿಪ್ಪುವೇ ಇಂದಿನ ಸಿದ್ದು ಎಂದು ಆರೋಪಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂಧ್ರ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಮೊರೆ ಹೋಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಮಧ್ಯಂತರ ತಡೆ ಕೋರಿದ್ದರು. ಅರ್ಜಿದಾರರ ವಾದ ಮನ್ನಿಸಿರುವ ನ್ಯಾಯಾಲಯ ಈಗ ಕಾರ್ಯಕ್ರಮಕ್ಕೆ ತಡೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next