ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫೇಕ್ಚರಿಂಗ್ (ಎಂಇಇಎಂಎಸ್ – 2024) ಎಂಬ ವಿಷಯದ ಕುರಿತು ಆಯೋಜಿಸಲಾದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಡಿ. 20 ರಂದು ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿ ಬೆಂಗಳೂರು ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರೀಯಲ್ ರಿಸರ್ಚ್ ನ ಹಿರಿಯ ವಿಜ್ಞಾನಿ ಡಾ| ಕೃಷ್ಣಚಂದ್ರ ಗೌಡ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಜಾಗತಿಕ ಸವಾಲುಗಳಾದ ಸುಸ್ಥಿರತೆ, ಇಂಧನ ದಕ್ಷತೆ ಮತ್ತು ತಾಂತ್ರಿಕ ಆವಿಷ್ಕಾರಗಳನ್ನು ಎದುರಿಸುವಲ್ಲಿ ಸಮ್ಮೇಳನಗಳ ಮಹತ್ವವನ್ನು ತಿಳಿಸಿ, ಇಂತಹ ಸಮ್ಮೇಳನಗಳು ಪ್ರಭಾವಶಾಲಿಯಾದ ಸಂಶೋಧನೆಗಳನ್ನು ಪ್ರೇರೇಪಿಸಿ, ಅರ್ಥಪೂರ್ಣ ಪರಿಹಾರಗಳನ್ನು ನೀಡುತ್ತವೆ ಎಂದು ಹೇಳಿದರು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್ ಮಾತನಾಡಿ, ಅಂತಾರಾಷ್ಟ್ರೀಯ ಸಮ್ಮೇಳನಗಳು ನುರಿತ ತಜ್ಞರು, ಸಂಶೋಧಕರು ಮತ್ತು ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಮೂಲಕ ಹೊಸ ತಂತ್ರಜ್ಞಾನ ಆವಿಷ್ಕಾರಗಳಿಗೆ ನಾಂದಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಸಮ್ಮೇಳನದ ಕಿರುಪುಸ್ತಕವನ್ನು ಡಾ| ಕೃಷ್ಣ ಚಂದ್ರ ಗೌಡ ಬಿಡುಗಡೆಗೊಳಿಸಿದರು. ಸಂಸ್ಥೆಯ ಪ್ರಾಂಶುಪಾಲ ಸಮಾರಂಭದ ಅಧ್ಯಕ್ಷತೆ ವಹಿಸಿ ಸಮ್ಮೇಳನದ ಮಾಹಿತಿ ನೀಡಿ ಭಾಗವಹಿಸಿದ ಎಲ್ಲರಿಗೂ ಶುಭ ಹಾರೈಸಿದರು.
ಮೆಕ್ಯಾನಿಕಲ್‌ವಿಭಾಗದ ಪ್ರಾಧ್ಯಾಪಕ ಡಾ| ಮಂಜುನಾಥ್ ಮುಖ್ಯ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸೌಮ್ಯ ಭಟ್ ಕಾರ್ಯಕ್ರಮ ನಿರೂಪಿಸಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಡಾ|ಭಾರತಿ ಪಂಜ್ವಾನಿ ವಂದಿಸಿದರು.