Advertisement

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌

10:37 PM Aug 15, 2022 | Team Udayavani |

ಹೊಸದಿಲ್ಲಿ: ಆಸ್ಟ್ರೇಲಿಯದ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಶುಭ ಹಾರೈಸಿದ್ದಾರೆ.

Advertisement

ಭಾರತದಲ್ಲಿರುವ ನನ್ನೆಲ್ಲ ಸ್ನೇಹಿತರಿಗೆ ಮತ್ತು ಕುಟುಂಬದ ಸದಸ್ಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ವಾರ್ನರ್‌ ಭಾರತದ ಮೇಲಿನ ಪ್ರೀತಿ, ಅಭಿಮಾನವನ್ನು ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ.

ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಪಿ.ವಿ. ಸಿಂಧು ಚಿನ್ನದ ಪದಕ ಗೆದ್ದಾಗ, ಭಾರತದ ಪ್ರಮುಖ ಹಬ್ಬಗಳ ಸಂದರ್ಭದಲ್ಲೆಲ್ಲ ಶುಭ ಕೋರಿದ್ದರು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿರುವ ಭಾರತದ ಕೆಲವರು, ಡೇವಿಡ್‌ ವಾರ್ನರ್‌ ಅವರಿಗೆ ಆಧಾರ್‌ ಕಾರ್ಡ್‌ ಒಂದನ್ನು ನೀಡಿ ಎಂದು ತಮಾಷೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next