ನವದೆಹಲಿ : ಕೋವಿಡ್-19 ಮೂರನೇ ಭೀತಿ ಹಿನ್ನೆಲೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಭಾರತದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಸೆ.30 ವರೆಗೆ ರದ್ದುಗೊಳಿಸಲಾಗಿದೆ.
ಇಂದು (ಆ.29) ಈ ಬಗ್ಗೆ ಪ್ರಯಾಣಿಕ ವಿಮಾನಗಳ ಪ್ರಧಾನ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆದರೆ, ವಿಶೇಷ ಸಂದರ್ಭಗಳನ್ನು ಪರಿಗಣಿಸಿ, ನಿಗದಿಯಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುಮತಿ ದೊರೆಯಲಿದ್ದು ಅಂತಾರಾಷ್ಟ್ರೀಯ ಎಲ್ಲಾ ಕಾರ್ಗೋ ಕಾರ್ಯಾಚರಣೆ ಹಾಗೂ ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.
ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್ 23 ರಿಂದ ಭಾರತದಿಂದ ಹೊರಡುವ ಮತ್ತು ಆಗಮಿಸುವಂತ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಷೇಧಿಸಲಾಗಿದೆ.
ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿರ್ಬಂಧಗಳು ಆಗಸ್ಟ್ 31, 2021ರಂದು ಕೊನೆಗೊಳ್ಳಬೇಕಿತ್ತು. ಆದಾಗ್ಯೂ, ಮೂರನೇ ಅಲೆಯ ಕಳವಳಗಳ ನಡುವೆ ಅಮಾನತು ಮತ್ತಷ್ಟು ವಿಸ್ತರಿಸಲಾಗಿದೆ.
ಇತ್ತೀಚಿನ ಸುತ್ತೋಲೆಯ ಪ್ರಕಾರ, ಸೆಪ್ಟೆಂಬರ್ 30, 2021 ರ ಭಾರತೀಯ ಪ್ರಮಾಣಿತ ಸಮಯ (ಐಎಸ್ ಟಿ) 23:59 ಗಂಟೆಯವರೆಗೆ ನಿಷೇಧ ಜಾರಿಯಲ್ಲಿರಲಿದೆ.