Advertisement
ಆರ್‌ಟಿ- ಪಿಸಿಆರ್ ಪರೀಕ್ಷೆ ಗಳನ್ನು ನಡೆಸುತ್ತಿರುವ ರಾಷ್ಟ್ರಗಳಲ್ಲಿರುವ ನೇಪಾಲದ ಪ್ರಜೆಗಳನ್ನು ಕರೆತರಲು ತೀರ್ಮಾನಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರತಿದಿನ 500 ಪ್ರಜೆಗಳನ್ನು ವಾಪಸ್ ಕರೆತರಲಾಗುವುದು.6 ತಿಂಗಳ ನಂತರ ನೇಪಾಲದಲ್ಲಿ ಅಂತಾರಾಷ್ಟ್ರೀಯ ವಿಮಾನ ಸೇವೆಗಳು ಪುನರಾರಂಭಗೊಂಡಿದೆ.
ಬರ್ಲಿನ್: ಜರ್ಮನಿಯ ರಾಜಧಾನಿ ಬರ್ಲಿನ್‌ನ 41 ಶಾಲೆಗಳ ವಿದ್ಯಾರ್ಥಿಗಳಲ್ಲಿ ಹಾಗೂ ಶಿಕ್ಷಕರಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಸೋಂಕು ದೃಢಪಟ್ಟ ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದ್ದು, ಶಾಲೆಗಳನ್ನು ಮತ್ತೆ ಆರಂಭಿಸುವುದರಿಂದ ಸೋಂಕು ಹರಡುವುದು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಇನ್ನು ದೇಶದಲ್ಲಿ ಶಿಕ್ಷಣ ಕ್ಷೇತ್ರ ಅಲ್ಲಿನ ಕೇಂದ್ರ ಸರಕಾರದ ಅಧೀನದಲ್ಲಿಲ್ಲ. ಹಾಗೇ ಇಲ್ಲಿನ 16 ರಾಜ್ಯಗಳು ಶಿಕ್ಷಣದ ನೀತಿಗಳನ್ನು ಸ್ವತಂತ್ರವಾಗಿ ರೂಪಿಸುತ್ತಿದ್ದು, ಈ ಅಂಶಗಳಿಂದಲ್ಲೇ ಕೋವಿಡ್ ಸೋಂಕು ನಿರ್ವಹಣೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ಜರ್ಮನಿಗೆ ಈವರೆಗೂ ಸಾಧ್ಯವಾಗಿಲ್ಲ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಜತೆಗೆ ಶಾಲೆಗಳಿಂದ ಮನೆಗಳಿಗೆ, ಮನೆಗಳಿಂದ ಸಮುದಾಯಕ್ಕೆ ಸೋಂಕು ಹರಡಬಹುದು ಎಂದು ಜರ್ಮನಿಯಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.