ನವದೆಹಲಿ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಶೀಘ್ರವೇ ಹಿಂಪಡೆಯಲಾಗುವ ನಿರೀಕ್ಷೆ ಇದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ:ಅಪ್ಪ ಬಿಜೆಪಿ, ಮಗ ಕಾಂಗ್ರೆಸ್: ನಿಷ್ಠೆ ಯಾರಿಗೆ?
ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಳೆದ ವರ್ಷ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ನಿರ್ಬಂಧ ವಿಧಿಸಿತ್ತು. ಬಳಿಕ ಕೋವಿಡ್ ಪ್ರಕರಣ ಇಳಿಕೆ ಕಂಡ ದೇಶಗಳ ಜತೆಗಿನ ಒಪ್ಪಂದದ ಮೂಲಕ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಪ್ರಸ್ತುತ ಭಾರತ 28 ದೇಶಗಳ ಜತೆ ಒಪ್ಪಂದ ಮಾಡಿಕೊಂಡಿದೆ.
ನವೆಂಬರ್ 30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಯಾನ ಸಂಚಾರದ ಮೇಲೆ ನಿರ್ಬಂಧ ವಿಧಿಸಲಾಗಿದೆ. ಆದರೆ ಇದು ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಸಂಚಾರಕ್ಕೆ ಅನ್ವಯಿಸುವುದಿಲ್ಲ.
ಕೋವಿಡ್ ಪ್ರಕರಣಗಳ ಆಧಾರದ ಮೇಲೆ ಕೆಲವೊಂದು ಆಯ್ದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಈ ವರ್ಷದ ಅಂತ್ಯದೊಳಗೆ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ಎಂದಿನಂತೆ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಸಚಿವಾಲಯ ತಿಳಿಸಿದೆ.