Advertisement
“ಸಂಸದ ಸಾಂಸ್ಕೃತಿಕ ಮಹೋತ್ಸವ’ ಅಂಗವಾಗಿ ಆಯೋಜಿರುವ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಹಾಗೂ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ ಒಳ್ಳೆಯ ಸಂಗಾತಿ. ಪರೀಕ್ಷೆ ಭಯ ಬೇಡ, ಅದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ಪರೀಕ್ಷಾ ಯೋಧರು ಎಂಬ ಕೃತಿ ಬರೆದಿದ್ದು, ಅದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಬೇಕು ಎಂದರು.
Related Articles
Advertisement
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಗಾಳಿಪಟ ಉತ್ಸವ ಹಮ್ಮಿಕೊಂಡಿರುವುದು ಉತ್ತಮ ಕಾರ್ಯ. ನಮ್ಮ ಸಂಸ್ಕೃತಿ, ಪರಂಪರೆ, ಗ್ರಾಮೀಣ ಸೊಗಡು ಮರೆಯಾಗುತ್ತಿರುವ, ಗಾಳಿಪಟ ಹಾರಿಸುವುದು ಕಡಿಮೆ ಆಗುತ್ತಿರುವ ಇಂದಿನ ಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಡಿಡಿಪಿಐ ಎಸ್.ಎಸ್. ಕೆಳದಿಮಠ, ಬಿಇಒ ಚನ್ನಪ್ಪಗೌಡ, ಉದ್ಯಮಿ ಡಾ| ವಿಎಸ್‌ವಿ ಪ್ರಸಾದ ಇನ್ನಿತರರಿದ್ದರು. ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ ಪರೀಕ್ಷಾ ಪೇ ಚರ್ಚೆ ಸ್ಪರ್ಧೆ ನಡೆಯಿತು. 120ಕ್ಕೂ ಹೆಚ್ಚು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.