Advertisement
ವಿದೇಶಕ್ಕೆ ತೆರಳಲು ಇರಬೇಕಾದ ಅರ್ಹತೆ, ಅಲ್ಲಿ ಎದುರಿಸಬೇಕಾದ ಕಾನೂನು ಪ್ರಕ್ರಿಯೆ, ಸಮಸ್ಯೆಯಾದಲ್ಲಿ ಯಾರನ್ನು ಸಂಪರ್ಕಿಸಬೇಕು, ಸುರಕ್ಷಿತವಾಗಿ ವಿದೇಶಕ್ಕೆ ತೆರಳಿ, ಸುಗಮವಾಗಿ ಸ್ವದೇಶಕ್ಕೆ ಮರಳು ಅನುಸರಿಸಬೇಕಾದ ವಿಧಾನ? ಈ ರೀತಿಯ ಹತ್ತಾರು ಸಂದೇಹಗಳಿಗೆ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿರುವ ಅಂತಾರಾಷ್ಟ್ರೀಯ ವಲಸೆ ಮಾಹಿತಿ ಕೇಂದ್ರದಲ್ಲಿ ಉಚಿತವಾಗಿ ಪರಿಹಾರ ಪಡೆಯಬಹುದು.
Related Articles
Advertisement
ಮಹಿಳೆಯರಿಗೂ ಅವಕಾಶವಿದೇಶದಲ್ಲಿ ಉದ್ಯೋಗಕ್ಕೆ ತೆರಳುವ ಮಹಿಳೆಯರ ಬಗ್ಗೆ ಕೇಂದ್ರವು ಹೆಚ್ಚಿನ ಕಾಳಜಿ ವಹಿಸಲಿದೆ. ವಿದೇಶದಿಂದ ವಾಪಸಾದ ಬಳಿಕ ಕಾರ್ಮಿಕರ ಕೌಶಲ ಸಂಗ್ರಹ ಮತ್ತು ಮರು ವಲಸೆಗೆ ಸಹಾಯ ಮಾಡುವುದರ ಜತೆಗೆ ಪುರ್ನವಸತಿ ಬಗ್ಗೆ ಮಾಹಿತಿ ನೀಡಲಿದ್ದು, ಕುಂದು ಕೊರತೆಗಳನ್ನು ನಿವಾರಿಸಲಿದೆ. ಸಮಗ್ರ ತರಬೇತಿ
ವಿದೇಶಕ್ಕೆ ತೆರಳುವ ಮೊದಲು 8 ಗಂಟೆಗಳ ಸಮಗ್ರ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಿದ್ದು, ವಿದೇಶ ಪ್ರಯಾಣದ ಅವಧಿಯಲ್ಲಿ ಮತ್ತು ಅನಂತರ ವಹಿಸಬೇಕಾದ ಮುನ್ನೆಚ್ಚರಿಕೆ ವಿಧಾನ, ಸಿದ್ಧತೆ, ವಿಮಾನ ನಿಲ್ದಾಣದಲ್ಲಿ ವ್ಯವಹರಿಸುವ ರೀತಿಯ ಬಗ್ಗೆಯೂ ತರಬೇತಿ ನೀಡಲಾಗುತ್ತದೆ. ಕೇಂದ್ರ ಎಲ್ಲೆಲ್ಲಿದೆ?
ಪ್ರಸ್ತುತ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಉಡುಪಿ, ದಾವಣಗೆರೆ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ. ಉಡುಪಿ ಕೇಂದ್ರದ ವ್ಯಾಪ್ತಿಗೆ ಉಡುಪಿ, ದ.ಕ., ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಲಿದೆ. ಉಡುಪಿ ಮತ್ತು ದ.ಕ. ಜಿಲ್ಲೆಗಳಿಂದ 40,000 ಕ್ಕೂ ಅಧಿಕ ಮಂದಿ ಮಧ್ಯಪ್ರಾಚ್ಯ ದೇಶದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಮಾಹಿತಿಗೆ ದೂ : 0820-2574851 ಅಥವಾ ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು. ವಿದೇಶದಲ್ಲಿ ಉದ್ಯೋಗದ ಕುರಿತು ಉದ್ಯೋಗಾಕಾಂಕ್ಷಿ ಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ 130ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.
– ಕುಮಾರ್ ಬಿ. ಆರ್., ಜಿಲ್ಲಾ ಕಾರ್ಮಿಕ ಅಧಿಕಾರಿ, ಉಡುಪಿ ಉಪ ವಿಭಾಗ