Advertisement

Gujarat; ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳಿಗೆ ಹಲ್ಲೆ: ಇಬ್ಬರ ಬಂಧನ

08:44 PM Mar 17, 2024 | Team Udayavani |

ಅಹಮದಾಬಾದ್: ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿದೇಶಗಳಿಂದ ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

Advertisement

ಶನಿವಾರ ರಾತ್ರಿ ಹಾಸ್ಟೆಲ್‌ನಲ್ಲಿ ನಡೆದ ಘಟನೆಯ ನಂತರ ಶ್ರೀಲಂಕಾ ಮತ್ತು ತಜಕಿಸ್ಥಾನ್‌ನಿಂದ ಬಂದಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ (IPC) ಅಡಿಯಲ್ಲಿ 20-25 ಅಪರಿಚಿತ ಆರೋಪಿಗಳ ವಿರುದ್ಧ ಗಲಭೆ, ಕಾನೂನುಬಾಹಿರ ಸಭೆ, ಸ್ವಯಂಪ್ರೇರಣೆಯಿಂದ ಹಲ್ಲೆ, ಆಸ್ತಿ ಹಾನಿ ಮತ್ತು ಕ್ರಿಮಿನಲ್ ಅತಿಕ್ರಮಣ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಗಳು ಹಿತೇಶ್ ಮೇವಾಡ ಮತ್ತು ಭರತ್ ಪಟೇಲ್ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲು ಒಂಬತ್ತು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಜಿಎಸ್ ಮಲಿಕ್ ತಿಳಿಸಿದ್ದಾರೆ.

ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಈ ವಿಷಯದಲ್ಲಿ ಕಠಿಣ ಮತ್ತು ನ್ಯಾಯಾಂಗ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next