Advertisement

ಅಂತಾರಾಷ್ಟ್ರೀಯ ಸೂರ್ಯ ಮಿತ್ರ ವಾರ್ಷಿಕ ಪ್ರಶಸ್ತಿ ಪ್ರಕಟ

11:57 PM Sep 11, 2022 | Team Udayavani |

ಬೆಂಗಳೂರು: ಅಂತಾರಾಷ್ಟ್ರೀಯ ಸೂರ್ಯ ಮಿತ್ರ ವಾರ್ಷಿಕ ಪ್ರಶಸ್ತಿಗೆ ಸೆಲ್ಕೋ ಸಂಸ್ಥೆಯ ಸೌರ ತಜ್ಞರಾದ ನೇವಿಲ್ಲೆ ವಿಲಿಯಮ್ಸ್‌, ರಿಚೆಂಡಾ ವಾನ್‌ ಲಿವೆನ್‌ ಹಾಗೂ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ (ಎಸ್‌ವಿವೈಎಂ) ಸಂಸ್ಥೆ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಸೆ.24ರಂದು ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್‌ ಭವನದಲ್ಲಿ ನಡೆಯಲಿದೆ.

Advertisement

ಸೌರಶಕ್ತಿಯ ಆದ್ಯ ಪ್ರವರ್ತಕರು ಜಗತ್ತಿನಾದ್ಯಂತ ಸೌರಶಕ್ತಿ ಉಪಯೋಗಗಳನ್ನು ಉತ್ತೇಜಿಸುತ್ತಿರುವ ನೇವಿಲ್ಲೆ ವಿಲಿಯಮ್ಸ್‌ ಅವರು 2020ನೇ ಸಾಲಿನ, ಇಂಧನ ಬಳಕೆ ಕುರಿತು ಜಾಗತಿಕ ಮನ್ನಣೆ ಪಡೆದ ಪ್ರಮುಖ ತಜ್ಞರು ಹಾಗೂ ಅನೇಕ ಜಾಗತಿಕ ಸಂಸ್ಥೆಗಳ ಮಾರ್ಗದರ್ಶಕರಾದ ರಿಚೆಂಡಾ ವಾನ್‌ ಲೀವೆನ್‌ ಅವರಿಗೆ 2021ನೇ ಸಾಲಿನ ಪ್ರಶಸ್ತಿ, ರಾಜ್ಯದ ಒಳಪ್ರದೇಶಗಳಲ್ಲಿ ಶಿಕ್ಷಣ ಆರೋಗ್ಯ ಕ್ಷೇತ್ರಗಳಲ್ಲಿ ಮೂಲ ಸೌಕರ್ಯಗಳನ್ನು ಬಲಪಡಿಸುವ ಕೆಲಸ ಮಾಡುತ್ತಿರುವ ಸರಕಾರೇತರ ಸಂಸ್ಥೆ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥೆ 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದೆ.

ಪ್ರಶಸ್ತಿ ಕುರಿತು ಸೆಲ್ಕೋ ಸಂಸ್ಥೆಯ ಸಂಸ್ಥಾಪಕರಾಗಿರುವ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಾದ ಡಾ| ಎಚ್‌. ಹರೀಶ್‌ ಹಂದೆ ಅವರು ಪ್ರತಿಷ್ಠಿತ “ಸೂರ್ಯಮಿತ್ರ’ ವಾರ್ಷಿಕ ಪ್ರಶಸ್ತಿಯನ್ನು 2012ರಿಂದ ಪ್ರದಾನ ಮಾಡುತ್ತಾ ಬಂದಿದ್ದಾರೆ. ಈ ಪ್ರಶಸ್ತಿಯನ್ನು ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಹರಿಕಾರರು ಮತ್ತು ಗ್ರಾಮೀಣ ಜನತೆಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದ ಅಸಾಧಾರಣ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next