Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ದೊಡ್ಡವರು. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ತಿಹಾರ್ ಜೈಲಿಗೆ ಹೋಗಿ ಬಂದವರು. ಅವರ ಬಗ್ಗೆ ಮಾತಾಡಲು ನಾನು ಸಣ್ಣವನು, ಕನಕಪುರದ ಬಂಡೆ ಒಡೆದು ಸಾಗಿಸಿ ಭಷ್ಟಾಚಾರ ಮಾಡಿದವರ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ. ನಾನು ಹಳ್ಳಿ ಹೈದ ಎಂದು ತಿರುಗೇಟು ನೀಡಿದರು.
Related Articles
Advertisement
ಇದನ್ನೂ ಓದಿ:ಹೈಕೋರ್ಟ್ ಮೊದಲು ನಿರ್ಧರಿಸಲಿ; ಹಿಜಾಬ್ ಕೇಸ್ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂ
ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದರೆಂದು ಕಾಂಗ್ರೆಸ್ ಹಸಿ ಸುಳ್ಳು ಹೇಳಿತು. ಸಾಂದರ್ಭಿಕವಾಗಿ ಮುಗ್ಧ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದಾರೆ ದೇಶಪ್ರೇಮದಿಂದ ಕೇಸರಿ ಧ್ವಜ ಹಾರಿಸಿರಬಹುದು. ಮಕ್ಕಳಿಗೆ ಅರ್ಥ ಆಗಿಲ್ಲ. ಖಾಲಿ ಕಂಬಕ್ಕೆ ಕೇಸರಿ ಧ್ವಜ ಹಾರಿಸಿದ್ದಾರೆ. ಅದು ತಪ್ಪು ಅಂತಾ ನಾನು ಹೇಳಲಾಗದು. ರಾಷ್ಟ್ರ ಧ್ವಜದ ಗೌರವವನ್ನು ವಿದ್ಯಾರ್ಥಿಗಳು ಕಡಿಮೆ ಮಾಡಿಲ್ಲ. ಮುಗ್ಧ ಮಕ್ಕಳು ಏನೂ ಅರಿವಾಗದೇ ಕೇಸರಿ ಧ್ವಜ ಹಾರಿಸಿದ್ದಾರೆ. ಅದು ತಪ್ಪು ಸರಿಯೆಂದು ಹೇಳಲಾಗಲ್ಲ. ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಮುಗ್ಧರು. ಅಮಾಯಕ ವಿದ್ಯಾರ್ಥಿಗಳ ಶಿಕ್ಷಣ ಹಾಳಾಗಬಾರದು, ಸಮವಸ್ತ್ರ ಧರಿಸಿ ಶಾಲೆಗೆ ಬನ್ನಿ ಎಂದರು.
ಸಚಿವ ಸ್ಥಾನದ ವಿಚಾರದ ಬಗ್ಗೆ ಮಾತನಾಡಿದ ಅವರು, ಕಾದು ನೋಡೋಣ. ನಮ್ಮ ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತಾಡಿದ್ದೇನೆ. ನಾಲ್ಕು ಗೋಡೆಯ ನಡುವಿನ ಮಾತುಕತೆ ಬಹಿರಂಗವಾಗಿ ಹೇಳಲ್ಲ ಎಂದರು.
ಪ್ರಿಯಾಂಕಾ ಗಾಂಧಿ ಬಿಕಿನಿ ಎಂದು ಮಾತನಾಡಿದ್ದು ತಪ್ಪು, ಅದರ ಬಗ್ಗೆ ಮಾತಾಡಿದ್ದೇನೆ. ಉಡುಪು ಮಹಿಳೆಯರ ವೈಯಕ್ತಿಕ ವಿಚಾರ, ಅದರ ಬಗ್ಗೆ ಮಾತನಾಡುವುದಿಲ್ಲ. ನಿನ್ನೆ ಮಾತಾಡುವಾಗ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದೇನೆ. ಸ್ತ್ರೀಯರ ಬಗ್ಗೆ ಬಿಜೆಪಿಗೆ, ಸರ್ಕಾರಕ್ಕೆ, ನನಗೆ ಅಪಾರ ಗೌರವ ಇದೆ ಎಂದು ರೇಣುಕಾಚಾರ್ಯ ಹೇಳಿದರು.