Advertisement
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವದಲ್ಲಿ ಇರುವ ಹುಲಿಗಳ ಪ್ರಮಾಣದಲ್ಲಿ ಶೇ. 60ರಷ್ಟು ಭಾರತ ದೇಶದಲ್ಲಿರುವದು ಹೆಮ್ಮೆಯ ವಿಷಯವಾಗಿದೆ. ವಿಶ್ವದಲ್ಲಿ ಒಟ್ಟು 5,578 ವಿವಿಧ ಜಾತಿಯ ಹುಲಿಗಳ ಸಂತತಿ ಇದ್ದು, ಈ ಪೈಕಿ ನಮ್ಮ ರಾಜ್ಯದಲ್ಲಿ 435 ಹುಲಿಗಳು ಇರುವದು ಸಂತಸ ತಂದಿದೆ ಎಂದರು.
Related Articles
Advertisement
ಝೂ ಮಾಸ್ಟರ ಪ್ಲಾನ್: ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದ ಝೂ ಮಾಸ್ಟರ್ ಪ್ಲಾನ್ ಸಿದ್ಧವಾಗಿದ್ದು 2024ರ ಆ. 15 ರೊಳಗಾಗಿ ಝೂ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಗದಗ ಜಿಲ್ಲಾ ಪ್ರವಾಸೋದ್ಯಮ ಸಮಿತಿಯು ಗದಗ ಮೃಗಾಲಯದ ಅಭಿವೃದ್ಧಿಗೆ ಮುಂದಾಗಿದ್ದು ಅಧ್ಯಯನ ಸಹ ನಡೆಸಿದೆ. ಗದಗ ಜಿಲ್ಲೆಯು ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಬಿಂಕದಕಟ್ಟಿ ಮೃಗಾಲಯದ ಹತ್ತಿರದಲ್ಲಿಯೇ ಅತ್ಯಾಧುನಿಕ ಸೌಲಭ್ಯಗಳುಳ್ಳ ಉತ್ತಮ ಕ್ಯಾಂಟಿನ್ ಮಾಡಲಾಗುವದು ಎಂದರು.
ಪ್ರವಾಸೋದ್ಯಮ ವರದಿ: ಹಿರಿಯ ಐಎಎಸ್ ಅಧಿಕಾರಿ ಮನೋಜಕುಮಾರ ಅವರ ನೇತೃತ್ವದಲ್ಲಿ ಗದಗ ಜಿಲ್ಲಾ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿ ಸಮತಿಯನ್ನು ರಚಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸಮಿತಿಯು ಆ. 8ರಂದು ಅಧ್ಯಯನದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಈ ಮೂಲಕ ಗದಗ ಜಿಲ್ಲಾ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲಕ್ಕುಂಡಿಯಲ್ಲಿ ಹುದುಗಿರುವ ದೇವಸ್ಥಾನಗಳನ್ನು ಗುರುತಿಸುವದರ ಮೂಲಕ ಅವುಗಳನ್ನು ಅಭಿವೃದ್ಧಿ ಪಡಿಸಿ ಲಕ್ಕುಂಡಿಯ ಗತ ವೈಭವವನ್ನು ಪ್ರವಾಸಿಗರಿಗೆ ಪರಿಚಯಿಸಬೇಕು. ಹಂಪಿಯಷ್ಟೇ ಲಕ್ಕುಂಡಿಯು ಸಮೃದ್ಧ ಪ್ರದೇಶವಾಗಿದೆ ಎಂಬುದನ್ನು ಪ್ರವಾಸಿಗರಿಗೆ ಪರಿಚಸಯಿಸಲು ಕ್ರಮ ಕೈಗೊಳ್ಳಲಾಗುವದು ಎಂದರು.
300 ಕೋಟಿ ಹೂಡಿಕೆ: ಪ್ರವಾಸೋದ್ಯಮದಲ್ಲಿ 300 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ನೂರಾರು ಹೋಟೆಲ್ ಸೌಲಭ್ಯಗಳು ಸೃಷ್ಟಿಯಾಗಲಿವೆ. ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಹಕಾರಿ. ಖಾಸಗಿ ಹೂಡಿಕೆಯಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು ಕೆಳವರ್ಗದ ಜನರೂ ಇದರ ಪ್ರಯೋಜನ ಪಡೆಯಲಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ರಾಜ್ಯದಲ್ಲಿ ಪ್ರವಾಸೋದ್ಯಮವು ಅಭಿವೃದ್ಧಿಗೊಳ್ಳುತ್ತಿದೆ ಎಂದು ಹೇಳಿದರು.
ಈ ವೇಳೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದಿಪೀಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಗಂಗಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಸೇರಿದಂತೆ ಗಣ್ಯರು, ಹಿರಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.