Advertisement
ದೇಶದಲ್ಲಿ ಸೋಂಕಿನ ಅಬ್ಬರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರವಿವಾರದಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನಾರಂಭಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ ಹೊಸ ನಿಯಮಾವಳಿಗಳನ್ನೂ ಬಿಡುಗಡೆ ಮಾಡಿದೆ. ಕೊರೊನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಇದ್ದ ಕಠಿಣ ನಿಯಮಗಳಿಗೆ ವಿನಾಯಿತಿ ನೀಡಲಾಗಿದೆ.
Related Articles
ಉದ್ಯೋಗ, ಶಿಕ್ಷಣ, ಉದ್ದಿಮೆ, ಕ್ರಿಡಾ ಚಟುವಟಿಕೆಗಳಿಗಾಗಿ ವಿದೇಶಗಳಿಗೆ ತೆರಳುವವರಿಗೆ ಬೂಸ್ಟರ್ ಡೋಸ್ ಲಸಿಕೆ
ನೀಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ಪಾವತಿಸಿ ಲಸಿಕೆ ಹಾಕಿಸಿಕೊಳ್ಳಲು ಅನುವು ಮಾಡಿಕೊಡಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ.
Advertisement
ಮಾರ್ಗಸೂಚಿಯಲ್ಲಿ ಏನಿದೆ?-ಮಾಸ್ಕ್ ಧರಿಸುವುದು, ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನದಲ್ಲಿ ಸ್ಯಾನಿಟೈಸರ್ ಬಳಕೆ ಕಡ್ಡಾಯ
-ವಿಮಾನದಲ್ಲಿರುವ ಕ್ಯಾಬಿನ್ ಸಿಬ್ಬಂದಿ ಪಿಪಿಇ ಕಿಟ್ ಧರಿಸಬೇಕಾಗಿಲ್ಲ
-ಪ್ರಯಾಣಿಕರನ್ನು ಮುಟ್ಟಿ ತಪಾಸಣೆ ನಡೆಸಲು ಅವಕಾಶ
-ಅಂತಾರಾಷ್ಟ್ರೀಯ ವಿಮಾನಗಳಲ್ಲಿ 3 ಸೀಟು ವೈದ್ಯಕೀಯ ತುರ್ತು ಪರಿಸ್ಥಿತಿಯ ಬಳಕೆಗೆ ಮೀಸಲು