Advertisement
ನ್ಯಾಯಾಧೀಶರಿಂದ ಯೋಗ ದಿನಾಚರಣೆಗೆ ಚಾಲನೆ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ 9ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಸವರಾಜ ತಳವಾರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನದಲ್ಲಿ ಮನುಷ್ಯನ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಅಗತ್ಯವಾಗಿದೆ. ಯಾವುದೇ ವಯಸ್ಸಿನ ಮಿತಿಯಿಲ್ಲದೆ ಯೋಗವನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
Related Articles
Advertisement
ಶಿಕ್ಷಕರಾದ ಪ್ರಭಾಕರ, ವಿನೋದ, ಅತಿಥಿ ಶಿಕ್ಷಕಿಯರಾದ ಕವಿತ, ಜಯಶೀಲ ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.
ಸೆಂಟ್ ಜಾನ್ಸ್ ಶಾಲೆಯಲ್ಲಿ ಮಕ್ಕಳಿಂದ ಯೋಗ: ಪಟ್ಟಣದ ಹೊರ ವಲಯದಲ್ಲಿರುವ ಸೆಂಟ್ ಜಾನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ವೇಳೆ ಶಾಲಾ ಮುಖ್ಯ ಶಿಕ್ಷಕಿ ಸುನೀತಾ ಮೇರಿ, ಯೋಗ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಶಿಕ್ಷಕಿ ಗೌರಮ್ಮ, ಶಿಕ್ಷಕ ಆಂಜನೇಯ, ಯೋಗದ ಪ್ರಯೋಜನಗಳನ್ನು ತಿಳಿಸಿ ಹಲವು ಸರಳ ಯೋಗಾಸನಗಳನ್ನು ಮಾಡಿ ಪ್ರದರ್ಶಿಸಿದರು. ಮಕ್ಕಳು ಈ ಯೋಗಾಸನಗಳನ್ನು ಮಾಡಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಊಟಿ ರಸ್ತೆ ಶಾಲೆ ಯೋಗಾಭ್ಯಾಸ: ಪಟ್ಟಣದ ಊಟಿ ರಸ್ತೆ ಸರ್ಕಾರಿ ಕೆ.ಪಿ.ಎಸ್ ಶಾಲೆಯಲ್ಲಿ ಶಿಕ್ಷಣ ಪೌಂಡೇಶನ್, ಮೈಂಡ್ ಟ್ರೀ ಸಹಯೋಗದೊಂದಿಗೆ ಯೋಗ ದಿನವನ್ನು ಆಚರಣೆ ಮಾಡಲಾಯಿತು. ಯೋಗ ಸಂಪನ್ಮೂಲ ವ್ಯಕ್ತಿಯಾದ ಸುಂದರೇಶ್ ವಿವಿಧ ಬಗೆಯ ಯೋಗಾಸದನ ಭಂಗಿಗಳನ್ನು ಹೇಳಿಕೊಟ್ಟರು. ಶಾಲಾ ಮುಖ್ಯ ಶಿಕ್ಷಕ ಸಿದ್ಧಾರ್ಥ್, ಸಹ ಶಿಕ್ಷಕರಾದ ಮಂಜುಳ, ಶಾರದಮ್ಮ, ರೇಖಾ, ನೀಲಾಂಬಿಕಾ, ವೃಷಬೇಂದ್ರ, ಶಿಕ್ಷಣ ಪೌಂಡೇಶನ್‌ನ ತಾಲೂಕು ವ್ಯವಸ್ಥಾಪಕ ಕಲ್ಲಿಗೌಡನಹಳ್ಳಿ ಮಹದೇವಸ್ವಾಮಿ ಸೇರಿದಂತೆ ಶಾಲಾ ಮಕ್ಕಳು ಹಾಗೂ ಇತರರು ಇದ್ದರು.