Advertisement
ಎರಡು ಕಡೆ ಮತದಾರರ ಗುರುತಿನ ಚೀಟಿ ಹೊಂದಿರುವವರ ಪತ್ತೆಗಾಗಿ ಚುನಾವಣ ಆಯೋಗ ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆಗೆ ಮುಂದಾಗಿದೆ. ಅದಕ್ಕಾಗಿ ಮತದಾರರು ಚುನಾವಣ ಅಧಿಕಾರಿಗಳಿಗೆ ತಮ್ಮ ಆಧಾರ್ ಸಂಖ್ಯೆಯನ್ನು ನೀಡಬೇಕು. ಇದು ಕಡ್ಡಾಯವಲ್ಲದಿದ್ದರೂ, ಆಯೋಗಕ್ಕೆ ಯಾವುದಾದರೂ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ ನೀಡಬೇಕಿದೆ. ಒಂದು ವೇಳೆ ಅರ್ಜಿ ಸಲ್ಲಿಸಿ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳಲಾಗದವರು ಚುನಾವಣ ಆಯೋಗದ ವೋಟರ್ ಹೆಲ್ಪ್ ಲೈನ್ ಮೊಬೈಲ್ ಆ್ಯಪ್ ಮೂಲಕ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳಬಹುದಾಗಿದೆ.
Advertisement
ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಅವಕಾಶ
11:13 PM Aug 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.