Advertisement

ಪೌರತ್ವ ಪ್ರತಿಭಟನೆ: 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತ

09:53 AM Dec 14, 2019 | Team Udayavani |

ಶಿಲ್ಲಾಂಗ್: ಕೇಂದ್ರ ಸರಕಾರದ ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಮುಂದೆ ಕಾಯ್ದೆಯಾಗಿ ಜಾರಿಗೆ ಬರಲಿದೆ. ಆದರೆ ಈಶಾನ್ಯ ರಾಜ್ಯಗಳಲ್ಲಿ ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿದ್ದು, ಮೇಘಾಲಯದಲ್ಲಿ 48 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

Advertisement

 

ಮೇಘಾಲಯದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುವಾರ ಸಂಜೆ ಈ ಆದೇಶ ಹೊರಡಿಸಿದ್ದು, ಮೊಬೈಲ್ ಇಂಟರ್ನೆಟ್ ಮತ್ತು ಮೆಸೇಜ್ ಗಳನ್ನು ತಡೆಹಿಡಿಯಲಾಗಿದೆ. ಶಾಂತಿ ವ್ಯವಸ್ಥೆ ಸುಧಾರಿಸಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪೂರ್ವ ಕಾಶಿ ಬೆಟ್ಟ ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೊಳಿಸಲಾಗಿದೆ.

Advertisement

ಇದೇ ಸಮಯದಲ್ಲಿ ಅಸ್ಸಾಂ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನು 48 ಗಂಟೆಗಳ ಕಾಲ ತಡೆಹಿಡಿಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next