Advertisement

ಸರ್ಕಾರಿ ಕಚೇರಿಗಳಲ್ಲಿ ಇಂಟರ್ನ್ ಶಿಪ್‌

01:55 AM Feb 15, 2019 | Team Udayavani |

 ಬೆಂಗಳೂರು: ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿಗಳಲ್ಲಿ ಇಂಟರ್ನ್ಶಿಪ್‌ (ತರಬೇತಿ) ಮಾಡಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

Advertisement

ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಸಮಾಜದಲ್ಲಿ ಹೊಸ ಚಿಂತನೆ, ಆಲೋಚನೆಗಳು, ಪ್ರಕ್ರಿಯೆಗಳು ನಡೆಯುತ್ತಿದ್ದು, ಸರ್ಕಾರಿ ವ್ಯವಸ್ಥೆಯಲ್ಲಿ ಇನ್ನೂ ಹಳೆಯ ಮಾದರಿ ಮುಂದುವರೆಯುತ್ತಿರುವುದರಿಂದ ಹೊಸ ಆಲೋಚನೆ ಹೊಂದಿರುವ ಸ್ನಾತಕೋತ್ತರ ಹಾಗೂ ಸಂಶೋಧನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಕಚೇರಿಗಳಲ್ಲಿ ಇಂಟರ್ನ್ಶಿಪ್‌ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಸರ್ಕಾರದ 27 ವಿವಿಧ ಇಲಾಖೆಗಳಲ್ಲಿ ಎರಡು ತಿಂಗಳು ತರಬೇತಿ ಪಡೆಯಬಹುದು ಎಂದು ಹೇಳಿದರು.

ಕೃಷಿ, ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಕಂದಾಯ ಸೇರಿದಂತೆ ಪ್ರಮುಖ ವಲಯದಲ್ಲಿ ಇಂಟರ್ನ್ಶಿಪ್‌ ಕೈಗೊಳ್ಳಲು ಅವಕಾಶ ನೀಡಲಾಗುವುದು. ಆಸಕ್ತರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಆಯ್ಕೆಯಾದವರಿಗೆ ಯಾವುದೇ ರೀತಿಯ ಗೌರವ ಧನ ಇರುವುದಿಲ್ಲ ಎಂದು ಹೇಳಿದರು.

ಪ್ರಮುಖ ತೀರ್ಮಾನಗಳು 

ಬ್ರಾಹ್ಮಣ ಅಭಿವೃದಿಟಛಿ ಮಂಡಳಿ ಸ್ಥಾಪನೆಗೆ ಒಪ್ಪಿಗೆ  ಹಾಸನ ಕೆಎಸ್‌ಆರ್‌ಟಿಸಿ ತರಬೇತಿ ಕೇಂದ್ರ 42 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ತರಬೇತಿ ಕೇಂದ್ರ ಮೇಲ್ದರ್ಜೆಗೇರಿಸುವುದು

Advertisement

ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದಲ್ಲಿ 27 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು, 97 ಕೋಟಿ ವೆಚ್ಚದಲ್ಲಿ ಒಳ ಚರಂಡಿ ಯೋಜನೆಗೆ ಒಪ್ಪಿಗೆ

ಮೈಸೂರು ನಗರ ಹಾಗೂ 92 ಗ್ರಾಮಗಳಿಗೆ ಕಾವೇರಿ ನದಿಯಿಂದ 340 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ತೀರ್ಮಾನ

 ಸರ್ಕಾರಿ ನೌಕರರು ನೇಮಕಗೊಂಡ 3 ವರ್ಷದ ಒಳಗೆ ಕಡ್ಡಾಯವಾಗಿ ವಯೋಮಿತಿ ಪ್ರಮಾಣ ಪತ್ರ ನೀಡಲು ಸೂಚಿಸಲು ನಿರ್ಧಾರ

 ಅಕ್ರಮ ಗಣಿಗಾರಿಕೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅವಧಿಯನ್ನು 2 ವರ್ಷಕ್ಕೆ ವಿಸ್ತರಿಸಲು ನಿರ್ಧಾರ

 ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ಮಹಾವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ

 ಬಳ್ಳಾರಿಯ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 65 ಕೋಟಿ ವೆಚ್ಚದಲ್ಲಿ ಮಹಿಳಾ ಹಾಗೂ ಪುರುಷರ ಹಾಸ್ಟೆಲ್‌ ನಿರ್ಮಾಣಕ್ಕೆ ಒಪ್ಪಿಗೆ.

Advertisement

Udayavani is now on Telegram. Click here to join our channel and stay updated with the latest news.

Next