Advertisement

Minister MC Sudhakar; ಪದವಿಯಲ್ಲಿ ಇಂಟರ್ನ್ ಶಿಪ್‌, ಮಾಸಿಕ 17 ಸಾವಿರ ರೂ. ಭತ್ಯೆ;

07:22 PM Mar 03, 2024 | Team Udayavani |

ಮೈಸೂರು: ಮೂರು ವರ್ಷದ ಪದವಿ ಕೋರ್ಸ್‌ಗಳಲ್ಲಿ ಕೊನೆಯ ವರ್ಷ ಕೌಶಲಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್‌ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ತಿಳಿಸಿದರು.

Advertisement

ನಗರದ ಕ್ರಾಫ‌ರ್ಡ್‌ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಮಾತನಾಡಿ, ಈ ವಿಚಾರವಾಗಿ ಕೇಂದ್ರ ಮತ್ತು ರಾಜ್ಯಗಳ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಐಎಎಸ್‌ ಅಧಿಕಾರಿಗಳ ತಂಡ ಸ್ಥಾಪನೆ ಮಾಡಿಕೊಂಡಿರುವ “ಕ್ರಿಸ್‌’ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ. ಎಇಡಿಪಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್‌ ನೀಡಿ ಮಾಸಿಕವಾಗಿ 11 ಸಾವಿರ ರೂ.ನಿಂದ 17 ಸಾವಿರ ರೂಪಾಯಿ ತರಬೇತಿ ಭತ್ಯೆನೀಡಲಾಗುತ್ತದೆ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇನ್ನು ಹಲವಾರು ಬದಲಾವಣೆ ತರಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ವಾಗ್ವನಿ ಫೌಂಡೇಷನ್‌ ಜತೆ 3 ಬಿಲಿಯನ್‌ ಡಾಲರ್‌ ಮೊತ್ತದ ಯೋಜನೆಗೆ ಒಡಂಬಡಿಕೆಗೆ ಮಾಡಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಭೋದಕರು ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿಪರತೆ ಬಗ್ಗೆ ತರಬೇತಿ ನೀಡಲಾಗುತ್ತದೆ.

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಭಾಷೆಯಲ್ಲಿ ಪಾಂಡಿತ್ಯ ಪಡೆದುಕೊಳ್ಳಲು ತರಬೇತಿ ಕೊಡಲಾಗುತ್ತದೆ. ಮೊದಲಿಗೆ ಬೆಂಗಳೂರಿನ ಆರ್‌ಸಿ ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತದೆ. ಬಳಿಕ ಮೈಸೂರು, ಮಂಗಳೂರು ವಿವಿಗೂ ವಿಸ್ತರಣೆ ಮಾಡಲಾಗುತ್ತದೆ. ಇಲ್ಲಿ ಸಾಧಕ-ಬಾಧಕಗಳನ್ನು ನೋಡಿ ಮುಂದೆ ಕಲಬುರಗಿ, ಧಾರವಾಡ, ಶಿವಮೊಗ್ಗಕ್ಕೂ ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next