ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರ ಪೊಲೀಸರು ಸೈಬರ್ ಪ್ರಕರಣದಲ್ಲಿ ಅಂತಾರಾಜ್ಯ ಸೈಬರ್ ವಂಚಕನನ್ನು ಬಂಧಿಸಿ, ಹಣ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಮುಂಬಯಿ ವಾಸಿ ಹರ್ಷಪಂಕಜ್ ಸಿಂಗ್ (31 ವರ್ಷ) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆಯ ವಿವರ:
ಆ.26ರಂದು ಸಂಜೆ 4 ಗಂಟೆ ಸಮಯದಲ್ಲಿ ಗೌರಿಬಿದನೂರು ನಗರದಲ್ಲಿ ಮಂಜುನಾಥ ಎಂಬವರ ಬ್ಯಾಂಕ್ ಖಾತೆಯಲ್ಲಿದ್ದ 50,000 ರೂ ಹಣವನ್ನು ಸೈಬರ್ ವಂಚನೆ ಮಾಡಿ ಬೇರೆ ಖಾತೆ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಆ.28 ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದ ತನಿಖೆಗೆ ಇಳಿದ ವಿಶೇಷ ತಂಡವು ದೂರುದಾರರ ಬ್ಯಾಂಕ್ ಖಾತೆಗಳು ಮತ್ತು ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿಯ ಗುರುತು ಪತ್ತೆ ಮಾಡಲಾಗಿತ್ತು. ಆರೋಪಿಯು ಮಹಾರಾಷ್ಟ್ರದಲ್ಲಿ ಕುಳಿತು ಸೈಬರ್ ವಂಚನೆ ಜಾಲವನ್ನು ಬಳಿಸಿಕೊಂಡು ಆನ್‌ಲೈನ್‌ನಲ್ಲಿ ಹಣ ಲಪಟಾಯಿಸುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡಿತು.
ಅಂಧೇರಿ ವೆಸ್ಟ್, ಮನಿಷ್‌ನಗರದ ವಾಸಿಯಾದ ಹರ್ಷಪಂಕಜ್ ಸಿಂಗ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆರೋಪಿಯು ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.