Advertisement

ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ: ಡಿಕೆಶಿ ಗಂಭೀರ ಆರೋಪ

11:30 AM Sep 15, 2022 | Team Udayavani |

ಮೈಸೂರು: ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ‌ ಬಗ್ಗೆ ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ. ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ. ನಾನು ಯಾವುದಕ್ಕೂ ಹೆದರುವವನಲ್ಲ. ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ಹೇಳಿಕೆಗೆ ವ್ಯಂಗ್ಯವಾಡಿದ ಅವರು, ಚಡ್ಡಿ ಪ್ಯಾಂಟು ಹಾಸಿಗೆ ಮೊಟ್ಟೆ ಇತ್ಯಾದಿ ಎಲ್ಲಾ ತನಿಖೆ ಮಾಡಲಿ. ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ ತನಿಖೆ ಆರಂಭಿಸಲು . ಮೂರು ವರ್ಷ ಬೇಕಿತ್ತೇ ಎಂದು ಪ್ರಶ್ನಿಸಿದರು.

ದಾಖಲೆ ಮುಚ್ಚಿಟ್ಟಿದ್ದಾರೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಉತ್ತು ಹಾರೆ ತೆಗೆದುಕೊಂಡು ಬುಲ್ಡೋಜರ್‌ ನಲ್ಲಿ ಅಗೆಯಲಿ, ಬೋರ್ ತೆಗೆಸಲಿ, ನಮಗೇನು ಸಮಸ್ಯೆ ಇಲ್ಲ ಎಂದರು.

ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, 30 ಮಂದಿಗೆ ಗಾಯ

Advertisement

ಪರಿಷತ್‌ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಎಲ್ಲಿ ಮತಾಂತರ ನಡೆಯುತ್ತಿದೆ? ಪ್ರಚಾರಕ್ಕಾಗಿ ಬಿಜೆಪಿ ಮಂಡನೆ ಮಾಡುತ್ತಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಅಲ್ಪಸಂಖ್ಯಾತರಿಗೆ ಭಯ ಹುಟ್ಟಿಸಲು ಕಾಯ್ದೆ ಮಂಡಿಸಲಾಗುತ್ತಿದೆ. ಭಾವನಾತ್ಮಕ ವಿಚಾರವನ್ನು ಕೆರಳಿಸಲು ಮಂಡನೆ ಮಾಡಲಾಗುತ್ತಿದೆ. ಕಾಯ್ದೆ ಈ ಹಿಂದೆಯೇ ಇತ್ತು. ದೇಶ ರಾಜ್ಯ ವಿಭಜನೆ ಮಾಡಲು ಬಿಜೆಪಿ ಮುಂದಾಗಿದೆ. ಜಾತಿ ಧರ್ಮವನ್ನು ಒಡೆಯಲು ಹುನ್ನಾರ ಮಾಡಲಾಗುತ್ತಿದೆ, ಹಿಂದೂ ಧರ್ಮದ ಓಲೈಕೆ ಹಾಗೂ ಹೈ ಕಮಾಂಡ್ ಮೆಚ್ಚಿಸಲು ಮಂಡನೆ ಮಾಡುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next