Advertisement
ಜಿಲ್ಲಾಡಳಿತವು ಈ ಗ್ಯಾಸ್ ವಾಸನೆಯ ಮೂಲ ಪತ್ತೆ ಮಾಡಿ ವರದಿ ಸಲ್ಲಿಸಲು ಜಿಲ್ಲಾ ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಗೆ ಸೂಚನೆ ನೀಡಿತ್ತು. ಇಲಾಖೆಯ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತಪಾಸಣೆ ನಡೆಸಿ ಮೂಲ ಎಲ್ಲಿ ಎನ್ನುವುದನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ.
Related Articles
Advertisement
ಮರುದಿನ (ಫೆ. 18) ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸಹಿತ ಜಿಲ್ಲಾಡಳಿತದ ವತಿಯಿಂದ ಎಲ್ಲೆಡೆ ತಪಾಸಣೆ ನಡೆಸಲಾಗಿತ್ತು. ಆದರೆ ಗ್ಯಾಸ್ ಸೋರಿಕೆಯ ಮೂಲ ಪತ್ತೆ ಆಗಿರಲಿಲ್ಲ.
ಗ್ಯಾಸ್ ಸೋರಿಕೆ ಪತೆಯಾಗಿಲ್ಲ
ಜಿಲ್ಲಾ ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಅಧಿಕಾರಿಗಳು ವಿವಿಧ ಭಾಗಗಳಿಗೆ, ಕೈಗಾರಿಕೆ ಘಟಕಗಳಿಗೆ ತೆರಳಿ ತಪಾಸಣೆ ನಡೆಸಿ ವರದಿ ಸಲ್ಲಿಸಿದ್ದಾರೆ. ಗ್ಯಾಸ್ ಸೋರಿಕೆ ಎಲ್ಲಿ ಆಗಿದೆ, ಗ್ಯಾಸ್ ವಾಸನೆ ಎಲ್ಲಿಂದ ಬಂತೆಂಬುದು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. –ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ
ಸಾಕಷ್ಟು ಪರಿಶೀಲಿಸಿದರೂ ಗೊತ್ತಾಗಿಲ್ಲ
ಗ್ಯಾಸ್ ವಾಸನೆಯ ಮೂಲ ಪತ್ತೆಗಾಗಿ ನಗರ ಮತ್ತು ಸುತ್ತ ಮುತ್ತ ಇರುವ ಕೈಗಾರಿಕೆ, ಕಾರ್ಖಾನೆಗಳಿಗೆ ಭೇಟಿ ನೀಡಿ ವಿವಿಧ ಆಯಾಮಗಳಲ್ಲಿ ಪರಿಶೀಲಿಸಿದ್ದೇವೆ. ಯಾವುದೇ ಸುಳಿವು ಲಭ್ಯವಾಗಿಲ್ಲ. ಗ್ಯಾಸ್ ವಾಸನೆ ನಿರ್ದಿಷ್ಟವಾಗಿ ಎಲ್ಲಿಂದ ಬಂತೆಂಬುದರ ಬಗ್ಗೆ ಪ್ರತ್ಯಕ್ಷ ಸಾಕ್ಷಿ ಕೂಡ ಎಲ್ಲಿಯೂ ಲಭಿಸಿಲ್ಲ. ಚಲಿಸುತ್ತಿದ್ದ ಯಾವುದೋ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಆಗಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಪುನಃ ಇಂತಹ ಪ್ರಕರಣ ವರದಿಯಾದರೆ ಗಂಭೀರವಾಗಿ ಪರಿಶೀಲಿಸಲಾಗುವುದು. –ರಾಜೇಶ್ ಮಿಶ್ರಕೋಟಿ, ಉಪ ನಿರ್ದೇಶಕರು, ದ.ಕ. ಜಿಲ್ಲಾ ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ