Advertisement

ಅಮಾನ್ಯ ನೋಟು ಜಪ್ತಿ: ಇಬ್ಬರ ಸೆರೆ

12:24 PM Sep 28, 2017 | Team Udayavani |

ಬೆಂಗಳೂರು: ಇತ್ತೀಚೆಗೆ ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಪ್ರಕರಣ ಬೇಧಿಸಿದ ಮಹಾಲಕ್ಷ್ಮೀ ಲೇಔಟ್‌ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಕುಶಾಲನಗರ ಮೂಲದ ಜಾಫರ್‌ (32) ಹಾಗೂ ರಜಾಕ್‌ (28) ಬಂಧಿತರು. ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ರಾತ್ರಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸೆ.24 ರಂದು ರಾತ್ರಿ ಮಹಾಲಕ್ಷಿ ಲೇಔಟ್‌ನ ಈಜುಕೊಳದ ಬಳಿ ಅಮಾನ್ಯಗೊಂಡಿರುವ ನೋಟುಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಈ ಮೊದಲು ಮೊಹಮ್ಮದ್‌ ಅಸ್ಲಂ, ಕಾಳಿಂಗಪ್ಪ ಹಾಗೂ ಮಂಜುನಾಥ್‌ ಎಂಬುವರನ್ನು ಬಂಧಿಸಿದ್ದರು. ಸಿಫ್ಟ್‌ ಡಿಸೈರ್‌ ಕಾರಿನಲ್ಲಿ 1 ಸಾವಿರ ರೂ. ಮುಖಬೆಲೆಯ 5.40 ಲಕ್ಷ ರೂ. ಅಮಾನ್ಯಗೊಂಡ ನೋಟುಗಳನ್ನು ಸಾಗಿಸಲಾಗುತ್ತಿತ್ತು.

ಇಷ್ಟು ಮೊತ್ತದ ಹಣ ಎಲ್ಲಿಂದ ಬಂದಿದೆ. ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದರ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಇದುವರೆಗೂ ಹಣದ ಮೂಲ ಮಾಲೀಕನ ಬಗ್ಗೆ ಬಂಧಿತರು ಬಾಯಿ ಬಿಡುತ್ತಿಲ್ಲ. ಈ ದಂಧೆಯ ಹಿಂದೆ ಇನ್ನಷ್ಟು ಮಂದಿ ಇರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next