Advertisement

ಹೂಡಿಕೆ ಮಾಡಿ ನಿರುದ್ಯೋಗ ನಿವಾರಿಸಿ

11:38 AM Jun 23, 2018 | |

ಬೆಂಗಳೂರು: ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣವಿದ್ದು, ಹೆಚ್ಚು ಬಂಡವಾಳ ಹೂಡಿಕೆ ಮಾಡಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ನಿರುದ್ಯೋಗ ನಿವಾರಣೆ ಕಾರ್ಯದಲ್ಲಿ ಮೈತ್ರಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಉದ್ಯಮಿಗಳಿಗೆ ಕರೆ ನೀಡಿದ್ದಾರೆ.

Advertisement

ಬೆಂಗಳೂರು ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿಯು (ಬಿಸಿಐಸಿ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 41ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಲ್ಲಿ ಕರ್ನಾಟಕ, ಜಗತ್ತಿನಲ್ಲೇ ಖ್ಯಾತಿ ಗಳಿಸಿದೆ. ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದ್ದು, ಸ್ಥಾಪಿಸುವ ಕೈಗಾರಿಕೆಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯ ಕಲ್ಪಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

“ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೈಗಾರಿಕೆ ಸ್ಥಾಪನೆಗೆ ಅಗತ್ಯ ಭೂಮಿ ನೀಡಲು ಅವಕಾಶವಿರಲಿಲ್ಲ. ನಂತರದ ಅವಧಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಪೂರಕವಾದ ಸಾಕಷ್ಟು ಕಾನೂನುಗಳು ರೂಪುಗೊಂಡಿವೆ. ಕೈಗಾರಿಕೆಗಳ ಅಭಿವೃದ್ಧಿಗೆ ಅಗತ್ಯ ಭೂಮಿ, ವಿದ್ಯುತ್‌ ಸೌಲಭ್ಯ ಕಲ್ಪಿಸಲು ನಿಯಮಗಳನ್ನು ಸಡಿಲಿಸಲಾಗಿದೆ,’ ಎಂದು ಹೇಳಿದರು.

ರಾಜ್ಯದಲ್ಲಿರುವ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ, ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ, ಕೈಗಾರಿಕಾ ಕ್ಷೇತ್ರದ ಪ್ರಗತಿಗೆ ಸಾಕಷ್ಟು ಆದ್ಯತೆ ನೀಡಿದೆ. ಹೀಗಾಗಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ನೆರವಾಗಬೇಕು ಎಂದು ಮನವಿ ಮಾಡಿದರು.

ಜೆ.ಪಿ.ಮೋರ್ಗನ್‌ ಚೇಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್‌ ಕುಮಾರ್‌, ಭಾರತೀಯ ಮ್ಯಾನೇಜ್‌ಮೆಂಟ್‌ ಸಂಸ್ಥೆಯ (ಐಐಎಂ) ಪ್ರಾಧ್ಯಾಪಕರಾದ ವಾಸಂತಿ ಶ್ರೀನಿವಾಸನ್‌, ಟಾಟಾ ಸನ್ಸ್‌ನ ಬ್ರಾಂಡ್‌ ಕಸ್ಟೋಡಿಯನ್‌ ಹರೀಶ್‌ ಭಟ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next