ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ಶನಿವಾರ ಮನವಿ ಮಾಡಿದೆ.
ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪರಿಷತ್ ಸದಸ್ಯ ಎನ್.ರವಿಕುಮಾರ್ ನೇತೃತ್ವದ ನಿಯೋಗ ಮತಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಕಾಂಗ್ರೆಸ್ ಪಕ್ಷದ ಆರೋಪ ದುರುದ್ದೇಶದಿಂದ ಕೂಡಿದೆ.
2013ರಿಂದ ನಡೆದಿರುವ ಈ ಕುರಿತಾದ ಬೆಳವಣಿಗೆಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಎನ್.ರವಿಕುಮಾರ್, ಮತದಾರರ ಪಟ್ಟಿಯಲ್ಲಿ 2-3 ಬಾರಿ ಹೆಸರುಗಳು ಪುನರಾವರ್ತನೆಯಾಗಿದ್ದ ಹೆಸರುಗಳನ್ನು ಕೈ ಬಿಡುವುದು ಚುನಾವಣ ಆಯೋಗದ ಕಾರ್ಯವಾಗಿದೆ. ಅದನ್ನು ಆಯೋಗ ಮಾಡುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.
Related Articles
ನಿಯೋಗದಲ್ಲಿ ಶಾಸಕ ರವಿ ಸುಬ್ರಮಣ್ಯ, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.