Advertisement

“ಸಾವಿನ ತನಿಖೆಯಾಗಲಿ’

12:00 AM Aug 01, 2019 | Team Udayavani |

ಬೆಂಗಳೂರು: ವಿ.ಜಿ. ಸಿದ್ಧಾರ್ಥ ಸಾವು ಎಷ್ಟು ದಾರುಣವೋ ಅದರ ಹಿನ್ನೆಲೆಯೂ ಅಷ್ಟೇ ನಿಗೂಢವಾದುದು. ಅವರನ್ನು ಇಂತಹ ದುರಂತಕ್ಕೆ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ವಿ.ಜಿ. ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದೆಂಬ ಸಂಶಯ ಹುಟ್ಟಿಸುವಂತಿದೆ.

Advertisement

ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳು, ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯ ನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಟೀಕರಿಸುತ್ತದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಿದ್ಧಾರ್ಥ ಸಾವು ದಿಗ್ಬ†ಮೆ ಮೂಡಿಸಿದೆ. ಈ ಸಾವು ಅನ್ಯಾಯ. ಕಳೆದ 30 ವರ್ಷದಿಂದ ಸಿದ್ಧಾರ್ಥನನ್ನು ನೋಡಿದ್ದೇನೆ.

ಸಿದ್ಧಾರ್ಥ ನಿಗೂಢ ಅಂತ್ಯ ಆತಂಕಕಾರಿ. ಅವರ ಅಂತಿಮ ಪತ್ರದ ಆಧಾರದಲ್ಲಿ ಕೇಂದ್ರ ಸರ್ಕಾರವು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಕೆ, ಕಿರುಕುಳ ನೀಡುತ್ತಿತ್ತೇ? ರಾಜಕೀಯ ಕಾರಣಗಳಿಗೆ ಅವರ ಕುಟುಂಬದ ಮೇಲೆ ಒತ್ತಡ ಹೇರಲಾಗುತ್ತಿತ್ತೆ ? ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಅವರು ಯಾವ ಒತ್ತಡಕ್ಕೆ ಈ ನಿರ್ಧಾರ ತೆಗೆದುಕೊಂಡರು ಎನ್ನುವುದು ತನಿಖೆಯಾಗಬೇಕಿದೆ. ಬ್ಯಾಂಕಿಂಗ್‌ ಹಾಗೂ ತೆರಿಗೆ ವ್ಯವಸ್ಥೆಯ ಬಗ್ಗೆ ಚರ್ಚೆಯಾಗಬೇಕು.
-ಎಂ.ಬಿ. ಪಾಟೀಲ್‌, ಮಾಜಿ ಸಚಿವ

ಸಿದ್ಧಾರ್ಥ ನಮ್ಮ ದೇಶದ ಆಸ್ತಿ. ಇಷ್ಟೊಂದು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದರು. ಆದಾಯ ತೆರಿಗೆ ಇಲಾಖೆ ಏನ್‌ ಬೇಕಾದರೂ ಮಾತನಾಡಿಕೊಳ್ಳಲಿ. ಎಲ್ಲವನ್ನು ದೇವರು ನೋಡಿಕೊಳ್ಳುತ್ತಾನೆ.
-ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ

Advertisement

ಸಿದ್ಧಾರ್ಥ ಅಕಾಲಿಕ ನಿಧನದಿಂದ ಇಡೀ ಕಾಫಿ ಉದ್ಯಮ ಬರಡಾಗಿದೆ. ಕರ್ನಾಟಕ ಕಾಫಿಗೆ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ಕಾಫಿ ಉದ್ಯಮವನ್ನು ಬೆಳೆಸಿ 50 ಸಾವಿರ ಉದ್ಯೋಗ ಸೃಷ್ಟಿಸಿ ಅವರ ಕುಟುಂಬಗಳಿಗೆ ದಾರಿದೀಪವಾಗಿದ್ದರು.
-ಪ್ರಹ್ಲಾದ ಜೋಶಿ, ಕೇಂದ್ರ ಸಂಸದೀಯ ವ್ಯವಹಾರ ಸಚಿವ

ಕಾಫಿ ಪುಡಿಯನ್ನು ವಿದೇಶಗಳಿಗೆ ರಫ್ತು ಮಾಡಿ ರಾಜ್ಯದ ಹೆಸರನ್ನು ಪ್ರಸಿದ್ಧಿಗೊಳಿಸಿದ್ದರು. 50,000 ಜನರನ್ನು ತಮ್ಮ ಸಂಸ್ಥೆಯಲ್ಲಿ ನೇಮಕ ಮಾಡಿಕೊಂಡು, ಅವರ ಕುಟುಂಬಗಳಿಗೆ ನೆರವಾಗಿದ್ದರು. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ.
-ಜಗದೀಶ ಶೆಟ್ಟರ, ಮಾಜಿ ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next