Advertisement

ಮಧು ಶಂಕಾಸ್ಪದ ಸಾವಿನ ತನಿಖೆ ನಡೆಸಿ

11:53 AM Apr 23, 2019 | Lakshmi GovindaRaju |

ಮೈಸೂರು: ರಾಯಚೂರಿನ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಮಧು ಪತ್ತಾರ್‌ ಅನುಮಾನಾಸ್ಪದ ಸಾವನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳವತಿಯಿಂದ ನಗರದ ರಾಮಸ್ವಾಮಿ ವೃತ್ತದ ಬಳಿ ಮೇಣದ ಬತ್ತಿ ಹೊತ್ತಿಸಿ ಸಂತಾಪ ಸೂಚಿಸುವ ಮೂಲಕ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಲಾಯಿತು.

Advertisement

ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌), ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಹಾಗೂ ಅಖೀಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘ (ಎಐಸಿಐಒ)ವತಿಯಿಂದ ಪ್ರತಿಭಟನೆ ನಡೆಸಿ, ರಾಯಚೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಮಧು ಪತ್ತಾರ್‌ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಇದನ್ನು ಅತ್ಯಾಚಾರ ಮತ್ತು ಕೊಲೆ ಎಂದು ಶಂಕಿಸಲಾಗಿದೆ.

ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ಮಾಡುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಒತ್ತಾಯಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next