Advertisement

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

11:43 PM Sep 20, 2024 | Team Udayavani |

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದ ಅಕ್ರಮಗಳ ತನಿಖೆ ನಡೆಸುವ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆಗಳಿಗೆ ಪೂರಕವಾಗಿ ಈ ಹಿಂದೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಅವಧಿಯಲ್ಲಿನ ಹಗರಣಗಳ ತನಿಖೆ ನಡೆಸುವಂತೆ ಒತ್ತಾಯಿಸಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಈ ಸಂಬಂಧ ಖುದ್ದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ.

Advertisement

ಆರಗ ಜ್ಞಾನೇಂದ್ರ ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ನಡೆದಿವೆ. ಪಿಎಸ್‌ಐ ನೇಮಕಾತಿ ಹಗರಣದಿಂದ, ಬಿಟ್‌ ಕಾಯಿನ್‌ ಹಗರಣದಿಂದ ಹಿಡಿದು ಕಳಪೆ ಕಟ್ಟಡ ಕಾಮಗಾರಿಗಳವರೆಗೂ ಇವು ನಡೆದಿವೆ. ಈ ವಿಚಾರಗಳನ್ನು ಮುಖ್ಯಮಂತ್ರಿ, ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿಯಾಗಿ, ಗಮನ ಸೆಳೆಯಲಾಗುವುದು ಎಂದು ಕಿಮ್ಮನೆ ರತ್ನಾಕರ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಿಎಸ್‌ಐ ಹಗರಣದ ತನಿಖೆ ವೇಳೆ ಏಕೆ ಇವರನ್ನು ವಿಚಾರಣೆ ಮಾಡಿಲ್ಲ ಎನ್ನುವುದೇ ಆಶ್ಚರ್ಯ. ಅಲ್ಲದೆ ಸ್ಯಾಂಟ್ರೋ ರವಿ, ದಿವ್ಯಾ ಹಾಗರಗಿ ಸೇರಿ ಹಗರಣದ ಪ್ರಮುಖ ಆರೋಪಿಗಳು ತೀರ್ಥಹಳ್ಳಿಗೆ ಬಂದುಹೋಗಿದ್ದಾರೆ ಎನ್ನುವ ಮಾಹಿತಿ ಇದೆ. ಇದರ ಬಗ್ಗೆಯೂ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next