Advertisement

Law: ನಕಲಿ ಬಿಲ್‌ ಸೃಷ್ಟಿಸಿ ವಂಚನೆ- ನಿವೃತ್ತ ನ್ಯಾಯಾಧೀಶರಿಂದ ತನಿಖೆ

12:03 AM Dec 27, 2023 | Team Udayavani |

ಬೆಂಗಳೂರು: ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ನಕಲಿ ಬಿಲ್‌ಗ‌ಳನ್ನು ಸೃಷ್ಟಿಸಿ ಸರಕಾರಕ್ಕೆ ವಂಚಿಸಲಾಗಿದೆ ಎನ್ನಲಾದ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

Advertisement

ಹಿಂದಿನ ಉಪನಿರ್ದೇಶಕ ಆರ್‌. ನಾಗರಾಜ ಮತ್ತು ಪ್ರಥಮ ದರ್ಜೆ ಸಹಾಯಕ ವಿಕ್ರಮ ಅವರು ಎಂಎಸ್‌ಪಿಸಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೇಲೆ ಪ್ರಭಾವ ಬೀರಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಳಗಾವಿ ಗ್ರಾಮೀಣ, ನಗರ, ಬೈಲಹೊಂಗಲ, ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ನಕಲಿ ಬಿಲ್‌ಗ‌ಳನ್ನು ಸೃಷ್ಟಿಸಿ ಸರಕಾರಕ್ಕೆ ಎರಡು ಕೋಟಿ ರೂ.ಗಳಷ್ಟು ವಂಚಿಸಿದ್ಧಾರೆಂದು ಆರೋಪಿಸಲಾಗಿದ್ದು, ಈ ಕುರಿತು ಮಾಧ್ಯಮಗಳಲ್ಲಿ ಸಹ ವರದಿಯಾಗಿತ್ತು.

ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಾಥಮಿಕವಾಗಿ ಸ್ವತಂತ್ರ ತನಿಖೆ ಕೈಗೊಳ್ಳಲು ನಿವೃತ್ತ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾನೂನು ಸಲಹೆಗಾರರಾದ ಎಚ್‌.ಜಿ. ನಾಗರತ್ನ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next