ಹೊಸಪೇಟೆ: ಬಿಜೆಪಿ ಆಡಳಿತದ ಅವಧಿಯಲ್ಲಿ “ಬಿ ರಿಪೋರ್ಟ್’ ಹಾಕಿದ ಪ್ರಕರಣಗಳನ್ನು ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ತತ್‌ಕ್ಷಣ ಮರು ತನಿಖೆಗೆ ಒಳಪಡಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ನಾ ನಾಯಕಿ ಸಮಾವೇಶದ ಹಿನ್ನೆಲೆಯಲ್ಲಿ ಬಿಡುವು ನೀಡಲಾಗಿದ್ದ ಪ್ರಜಾಧ್ವನಿ ಬಸ್ ಯಾತ್ರೆ ಹೊಸ ಪೇಟೆಯಲ್ಲಿ ಮಂಗಳವಾರ ಪುನರಾ ರಂಭಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಗಳಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ರಾಜ್ಯಪಾಲರ ಹುದ್ದೆ ದುರುಪಯೋಗ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಆಡಳಿತದಲ್ಲಿ ನಡೆದ ಅನೇಕ ಪ್ರಕರಣಗಳ ಮರುತನಿಖೆ ನಡೆಸಲಿದೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ಮೀಸಲಿಡುವ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಿಎಂ ಬೊಮ್ಮಾಯಿ ಬರೀ ಸುಳ್ಳು ಹೇಳುತ್ತಾರೆ. ಬಿಜೆಪಿ ಸುಳ್ಳನ್ನು ಉತ್ಪಾದನೆ ಮಾಡುವ ಫ್ಯಾಕ್ಟರಿ ಇದ್ದಂತೆ. ಅಧಿಕಾರಕ್ಕೆ ಬರುವ ಮುನ್ನ ನೀಡಿದ 600 ಭರವಸೆಗಳಲ್ಲಿ ಕನಿಷ್ಠ ಶೇ. 10ರಷ್ಟು ಕೂಡ ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ಕೊಟ್ಟ 165 ಭರವಸೆಗಳಲ್ಲಿ 158 ಈಡೇರಿಸಿದೆ ಎಂದರು.