Advertisement
ಆದರೆ ಇಷ್ಟಕ್ಕೇ ಸಮಾಧಾನಗೊಳ್ಳದ ಬಿಜೆಪಿ ಸದಸ್ಯರು, ಎಫ್ಐಆರ್ ದಾಖಲಿಸಿದ ಎಸ್‌ಐ ಅನ್ನು ತತ್‌ಕ್ಷಣವೇ ಅಮಾನತು ಮಾಡಬೇಕು ಮತ್ತು ಶಾಲೆಯ ವಿರುದ್ದ ಪೋಷಕರು ನೀಡಿರುವ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು. ಇದು ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಎಡೆ ಮಾಡಿಕೊಟ್ಟ ಕಾರಣ ಸದನವನ್ನು ಮುಂದೂಡಲಾಯಿತು.ತಾನು ಸ್ಥಳದಲ್ಲಿಲ್ಲದಿದ್ದರೂ ಅನಿಲ್ ಲೋಬೋ ನೀಡಿದ ದೂರಿನ ಆಧಾರದಲ್ಲಿ ನನ್ನ ಮೇಲೆ ದೂರು ದಾಖಲಾಗಿದೆ ಎಂದು ಭರತ್ ಶೆಟ್ಟಿ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾವಿಸಿದರು. ಇದಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ ಗೃಹ ಸಚಿವರು, ಭರತ್ ಶೆಟ್ಟಿ ಶಾಲೆಯ ಬಳಿಗೆ ಹೋಗಿಲ್ಲ. ನಾನು ಇದರ ಬಗ್ಗೆ ಪರಿಶೀಲಿಸಿಕೊಂಡಿದ್ದೇನೆ. ಡಿಡಿಪಿಐ ಕಚೇರಿಗೆ ಹೋಗಿ ಹಿಂದೂ ಮಕ್ಕಳನ್ನು ಕ್ರಿಶ್ಚಿಯನ್ ಶಾಲೆಗೆ ಸೇರಿಸಬೇಡಿ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದು ಪ್ರಚೋದನಕಾರಿ ಹೇಳಿಕೆ ಅಂತ ದೂರಿನಲ್ಲಿ ಸೇರಿಸಿದ್ದಾರೆ ಎಂದರು.
ಪ್ರಾಥಮಿಕ ತನಿಖೆ ವೇಳೆ ಶಿಕ್ಷಕಿಯ ತಪ್ಪಿಲ್ಲ ಎಂಬುದು ಗೊತ್ತಾಗಿದೆ ಅದನ್ನು ಸದನಕ್ಕೆ ತಿಳಿಸಿದ್ದೇನೆ. ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಬೇಕು. ಒಂದು ವೇಳೆ ಅಧಿಕಾರಿ ತಪ್ಪು ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಜತೆಗೆ, ಶಾಸಕ ಭರತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್ ಶಾಲೆಗಳಿಗೆ ಮಕ್ಕಳನ್ನು ಸೇರಿಸಬಾರದು ಎಂಬಂತೆ ಪೋಸ್ಟ್ ಮಾಡಿದ್ದನ್ನು ಓದಿ, ಹೀಗಿದ್ದಾಗ್ಯೂ ಎಫ್‌ಐಆರ್ ಮಾಡುವುದು ತಪ್ಪೇ ಎಂದು ಪ್ರಶ್ನಿಸಿದರು. ಅದರಲ್ಲಿ ಏನು ತಪ್ಪಿದೆ ಎಂದು ಭರತ್ ಶೆಟ್ಟಿ ಅವರು ಪ್ರಶ್ನಿಸಿದರು.
Related Articles
Advertisement