ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಅದಕ್ಕಾಗಿಯೇ ಎಸ್‌ಐಟಿ ರಚನೆಯಾಗಿದೆ. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.
Advertisement
ಅಕ್ರಮದ ಸತ್ಯಾಂಶ ತಿಳಿಯಲು ತನಿಖೆಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲ ನಿವೇಶನಗಳನ್ನು ಅಮಾನತಿನಲ್ಲಿಡಲಾಗಿದೆ. ಹಾಗಾಗಿ ಸರಕಾರಕ್ಕೆ ನಷ್ಟವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಬುಧವಾರ ಈ ಕುರಿತು ಅವರು ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ನಿವೇಶನಗಳನ್ನು ಹಂಚಿಕೆ ಮಾಡಿದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ಅನಂತರ ಈ ಬಗ್ಗೆ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.